ಗೃಹಲಕ್ಷ್ಮಿ ಯೋಜನೆಯ ಬಾಕಿಯಿರುವ ಹಣವನ್ನು ಹಾಗೂ ಈ ತಿಂಗಳ ಕಂತಿನ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿಯನ್ನು ನೀಡಿದ್ದು, ಈ ಆಗಸ್ಟ್ ನ ಮೊದಲ ವಾರವೇ ಜೂನ್, ಜುಲೈ ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ.
ಕಳೆದ 2 ತಿಂಗಳು ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣವು ಬಿಡುಗಡೆಯಾಗಿಲ್ಲ.
ಇದೀಗ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವ ಕೆಲಸವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು, ಅಂತಿಮವಾದ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಗಸ್ಟ್ ಮೊದಲ ವಾರವೇ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಇನ್ನೂ ಈ ಮಾಹಿತಿಯ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯೆಯನ್ನು ನೀಡಿದ್ದು, ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿಂದ ಬರುತ್ತಿಲ್ಲ ಎನ್ನುವುದು ತಪ್ಪು ಮಾಹಿತಿ, ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಜಮಾ ಮಾಡಿದ್ದೇವೆ. ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಹಾಕಲು ತಾಂತ್ರಿಕ ದೋಷಗಳು ಕಾರಣವಾಗಿದ್ದು, ಈಗಾಗಲೇ ಡಿಬಿಟಿ ಅನ್ನು ಪುಶ್ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಜಮಾ ಮಾಡಲಾಗುವುದು.
ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ನೀಡಲಾಗುತ್ತಿದೆ. ಚುನಾವಣೆಯನ್ನು ನೆಡೆಯುವುದಕ್ಕಿಂತ ಮುಂಚೆ ರಾಜ್ಯದ ಮಹಿಳೆಯರಿಗೆ ಈ ಭರವಸೆಯನ್ನು ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಣೆಯನ್ನು ನೀಡಿದ್ದಾರೆ.
ಇತರೆ ವಿಷಯಗಳು:
ಫೇಲಾದ್ರೆ ಚಿಂತೆ ಬಿಡಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಮರು ದಾಖಲಾತಿ!
ಇಂದು ‘ಐಟಿಆರ್’ ಫೈಲ್ ಮಾಡದಿದ್ರೆ ದಂಡ ಫಿಕ್ಸ್.! ತೆರಿಗೆದಾರರಿಗೆ ಲಾಸ್ಟ್ ಚಾನ್ಸ್