ಹಲೋ ಸ್ನೇಹಿತರೇ, ಕರ್ನಾಟಕ ಮಳೆ ಮಾಹಿತಿಯ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ ಗಂಟೆಗಳಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಿರಗುಡಿ ವ್ಯಾಪ್ತಿಯಲ್ಲಿ ಅತ್ಯಧಿಕ 104 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಮಂಡ್ಯ, ಶಿವಮೊಗ್ಗ, ಮೈಸೂರು, ಹಾಸನ, ರಾಯಚೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತಮ ಮಳೆ ಬಂದಿರುತ್ತದೆ.
Contents
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ:
ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಉಡುಪಿ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೆಲವೆಡೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಹವಾಮಾನ ಮುನ್ಸೂಚನೆ ಮಾಹಿತಿ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಇದನ್ನೂ ಸಹ ಓದಿ : ಕೇಂದ್ರದ ಈ 5 ಟಾಪ್ ಯೋಜನೆಗಳಿಂದ ಬಂಪರ್ ಲಾಭ! ಪ್ರತಿ ತಿಂಗಳು ಸಿಗತ್ತೆ 1 ಲಕ್ಷ ರೂ.ಗಳ ನೆರವು
ವಿಜಯಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಪಾವಗಢ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮಳೆ ಮಾಹಿತಿ ಹೀಗಿದೆ:
ಈಗಿನ ಪ್ರಕಾರ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿದೆ. ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ನಂತರ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ. ಈಗ ಅರಬ್ಬಿ ಸಮುದ್ರ ದಕ್ಷಿಣ ಭಾಗದಿಂದ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಬೀಸುತ್ತಿರುವ ಗಾಳಿಯ ಒತ್ತಡವೂ ಕಡಿಮೆಯಾಗುವ ಸೂಚನೆಗಳಿರುವುದರಿಂದ ಒಳನಾಡು ಭಾಗಗಳಲ್ಲಿ ಈಗ ಆಗುತ್ತಿರುವ ಮಳೆಯು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. ಒಟ್ಟಿನಲ್ಲಿ ಮುಂಗಾರು ಮುಂದಿನ 10 ದಿನಗಳವರೆಗೂ ದುರ್ಬಲವಾಗಿರಲಿದೆ.
ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ನಕ್ಷೆಯ ವಿವರ ಹೀಗಿದೆ:
ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಮಂಗಳೂರು, ವಿಜಾಪುರ, ಬೀದರ್ ಜಿಲ್ಲೆಯ ವ್ಯಾಪ್ತಿಯಲ್ಲಿ 60 ಮಿಲಿ ಮೀಟರ್ ನಿಂದ 125 ಮಿಮಿ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ 20 ಮಿಲಿ ಮೀಟರ್ ನಿಂದ 40 ಮಿಮಿ ಮಳೆ ಮುನ್ಸೂಚನೆ ನೀಡಲಾಗಿದೆ.
ಇತರೆ ವಿಷಯಗಳು:
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಮತ್ತೆ ಅವಕಾಶ! ಈ ದಾಖಲೆಗಳಿದ್ರೆ ಸಾಕು
ಮಹಿಳೆಯರಿಗೆ ಬಂತು 11ನೇ ಕಂತಿನ ಗೃಹಲಕ್ಷ್ಮಿ ಹಣ! ನಿಮ್ಮ ಖಾತೆ ಚೆಕ್ ಮಾಡಿ
EPFO ಖಾತೆದಾರರಿಗೆ ಸಿಹಿ ಸುದ್ದಿ! ಸಿಗಲಿದೆ ಈ ಹೊಸ ಸೌಲಭ್ಯಗಳು