ಬೆಂಗಳೂರು: ಅತಿ ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಏಳರಿಂದ ಎಂಟು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆಯನ್ನು ನಡೆಸಿದೇನೆ. ತಕ್ಷಣ ಪರಿಹಾರ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಮಳೆಯಿಂದಾಗಿ ಮನೆ ಹಾನಿ ಆದರೆ ವಸತಿಯ ಯೋಜನೆಯಡಿಯಲ್ಲಿ ಮನೆಯನ್ನು ಕೊಡಬೇಕು. ರಸ್ತೆಗಳು ಕುಸಿದರೆ ಸೋಮವಾರದೊಳಗೆ ದುರಸ್ತಿಯನ್ನು ಮಾಡಬೇಕು. ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆಯನ್ನು ನೀಡಲಾಗಿದೆ. ಅಂಗನವಾಡಿಯ, ಶಾಲೆಗಳ ರಿಪೇರಿ ಆಗಬೇಕಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಎಸ್.ಪಿ. ಮಳೆಹಾನಿ ಪ್ರದೇಶಗಳನ್ನು ಪರಿಶೀಲನೆಯನ್ನು ನಡೆಸಬೇಕು ಎಂದು ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.
ಇದನ್ನೂ ಸಹ ಓದಿ: 6-12 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಜೊತೆ ಎಲ್ಲವೂ ಫ್ರೀ.! ನವೋದಯ ಪ್ರವೇಶಾತಿಗೆ ಇಂದೇ ಅರ್ಜಿ ಹಾಕಿ
ಪ್ರಕೃತಿ ವಿಕೋಪದಿಂದಾಗುವ ಅನಾಹುತ ತಡೆಯಲು ತಕ್ಷಣವೇ ಕ್ರಮವಹಿಸಲು ಸೂಚನೆ
ಶುಕ್ರವಾರ ಮಲೆನಾಡು, ಕರಾವಳಿ, ಪಶ್ಚಿಮಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಬಾದಿತವಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ರಾಜ್ಯದ ಪಶ್ಚಿಮ ಘಟ್ಟದ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ತೀವ್ರತರವಾದ ಮಳೆಯಾಗುತ್ತಿದ್ದು, ಇದರಿಂದ ಉಂಟಾದ ರಸ್ತೆಯ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿಯ ಸೋರುವಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ಥಿಯನ್ನು ತಕ್ಷಣವೇ ಕೈಗೊಳ್ಳುವುದರ ಮೂಲಕ ಯಥಾಸ್ಥಿತಿಯಂತೆ ನಿರ್ವಹಣೆಯನ್ನು ಮಾಡಲು ಮುಂದಿನ 3 ದಿನಗಳ ಕಾಲ ಕಟ್ಟೆಚ್ಚರವನ್ನು ವಹಿಸುವಂತೆ ಸೂಚನೆಯನ್ನು ನೀಡಿದ್ದಾರೆ.
ಇತರೆ ವಿಷಯಗಳು:
ರೀಲ್ಸ್ ಪ್ರಿಯರಿಗೆ BMTC ಆಫರ್: ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ ಲಕ್ಷ ಗೆಲ್ಲಿ!
ಈ ಬ್ಯಾಂಕಿನಲ್ಲಿ ಖಾತೆಯಿದ್ದ ರೈತರಿಗೆ ಗುಡ್‌ನ್ಯೂಸ್.! ಇಂದೇ ಬ್ಯಾಂಕ್‌ಗೆ ಭೇಟಿ ನೀಡಿ