ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಅಂಗನವಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆಯು ಬಂದಿದ್ದು, ಶೀಘ್ರವೇ ಹೆಚ್ಚಳವನ್ನು ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರದ ಕಲಾಪದ ವೇಳೆಯೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಧನದ ಹೆಚ್ಚಳಕ್ಕೆ ಸರ್ಕಾರದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿಯಿದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿಯ ಬಗ್ಗೆ ಚಿಂತನೆಯನ್ನು ನಡೆಸಲಾಗುತ್ತಿದೆ ಎಂದರು.
2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಳ ಮಾಡಿದ್ದರು. ಆದಾದ ಬಳಿಕ ಗೌರವ ಧನವು ಹೆಚ್ಚಳವಾಗಿಲ್ಲ. ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆಯು ಬಂದಿದ್ದು, ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಇತರೆ ವಿಷಯಗಳು:
ಆನ್ಲೈನ್ನಲ್ಲಿ ಹಣ ವರ್ಗಾವಣೆ.. ಆರ್ಬಿಐ ಮಹತ್ವದ ನಿರ್ಧಾರ..!
38 ಲಕ್ಷಕ್ಕೂ ಅಧಿಕ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!