ಹಲೋ ಸ್ನೇಹಿತರೆ, ರಾಜ್ಯದ ಅನೇಕ ಅವಿವಾಹಿತ ಯುವಕರಿದ್ದು ವಿವಾಹ ಭಾಗ್ಯ ಕಲ್ಪಿಸುವ ದೃಷ್ಟಿಯಿಂದ ಜಿಲ್ಲಾಡಳಿತ “ಜೀವನ ಸಂಗಮ” ಎಂಬ ಪೋರ್ಟಲ್ ಅನ್ನು ಆರಂಭಿಸಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಇದರ ಸದುಪಯೋಗವನ್ನು ಯಾರೆಲ್ಲಾ ಪಡೆದುಕೊಳ್ಳಬಹುದಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡುಕೊಳ್ಳಲು ಮತ್ತು ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆಯುವುದರ ಮೂಲಕ ಅವರು ವಿವಾಹ ಆಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.
ಇದನ್ನು ಓದಿ: ಉಚಿತ ಪಡಿತರಕ್ಕೆ ಮತ್ತೊಂದು ನಿಯಮ..!
ಈ ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಈ ಪೋರ್ಟಲ್ ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ದತ್ತಾಂಶವನ್ನು ಗೌಪ್ಯವಾಗಿ ಇಟ್ಟು, ಕೇವಲ ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹವಾದ ಯುವಕ-ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ಪೋರ್ಟಲ್ ಕಲ್ಪಿಸಲಾಗಿದ್ದು, ಜಿಲ್ಲೆಯ ನಿವಾಸಿಗಳು ಮಾತ್ರ ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇತರೆ ವಿಷಯಗಳು:
ಕುಶಲಕರ್ಮಿಗಳು, ಉದ್ಯಮಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನದ ಭಾಗ್ಯ!
ಅರಿವು ಯೋಜನೆಯಡಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ!