ಹಲೋ ಸ್ನೇಹಿತರೇ, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಪ್ಲೇ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ.
ರಾಜ್ಯದ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಒಟ್ಟು 513 ಹುದ್ದೆಗಳು ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 29 ಅಪ್ಲೇ ಮಾಡಲು ಕೊನೆ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರದಲ್ಲಿ ಪೋಸ್ಟಿಂಗ್ ಹಾಕಲಾಗುವುದು.
ಹುದ್ದೆಯ ಮಾಹಿತಿ:
120 ಅಂಗನವಾಡಿ ಕಾರ್ಯಕರ್ತೆ & 393 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿಯಿದೆ.
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC & ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು. ಉದ್ಯೋಗದ ಸ್ಥಳ ಕೋಲಾರ
ವಯೋಮಿತಿ:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ & ಗರಿಷ್ಠ 35 ವರ್ಷ ಮೀರಿರಲೇಬಾರದು. PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್ & ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://karnemakaone.kar.nic.in/abcd/home.aspx ಗೆ ಭೇಟಿ ಮಾಡಿ.
ಇತರೆ ವಿಷಯಗಳು
APL, BPL ರೇಷನ್ ಕಾರ್ಡ್ ಇದ್ದವರಿಗೆ ವಿಶೇಷ ಅಧಿಕಾರ ಕೊಟ್ಟ ಸರ್ಕಾರ!
ರಾಜ್ಯದಲ್ಲಿ ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಮಳೆ! IMD ಮುನ್ಸೂಚನೆ