rtgh
Headlines

ಸಣ್ಣ-ಅತಿ ಸಣ್ಣ ರೈತರಿಗೆ ವಾರದೊಳಗೆ 2,800 ರೂ.ರಿಂದ 3,000 ರೂ. ಪರಿಹಾರ ಜಮೆ

Karnataka crop loss compensation
Share

ಹಲೋ ಸ್ನೇಹಿತರೇ, ಕರ್ನಾಟಕದ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳ ಜೀವನೋಪಾಯಕ್ಕಾಗಿ ಸೂಕ್ತ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 2023-24ರಲ್ಲಿ ಬೆಳೆ ನಷ್ಟ ಉಂಟಾಗಿರುವ ಎಲ್ಲಾ ರೈತರಿಗೆ ಈ ಪರಿಹಾರ ಸಿಗಲಿದೆ. ಆ ಪರಿಹಾರವನ್ನು ಪಡೆಯುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಯಿರಿ.

Karnataka crop loss compensation

ಸರ್ಕಾರದ ಅಂಕಿ ಅಂಶಗಳ ಪ್ರಕಾರ, 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ 2,800 ರೂ.ನಿಂದ 3,000 ರೂ.ವರೆಗೂ ನೀಡಲು ಸರ್ಕಾರ ತೀರ್ಮಾನ ಮಾಡಿದೆ.

ಬೆಂಗಳೂರು: ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ತೀರ್ಮಾನಿಸಲಾಗಿದೆ. ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಲಾಗಿದೆ

ರಾಜ್ಯದಲ್ಲಿಬರ, ನೆರೆ ಹಾಗೂ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ರಚನೆಯಾಗಿರುವ ಸಚಿವ ಸಂಪುಟ ಉಪಸಮಿತಿಯ ಸಭೆ ವಿಧಾನಸೌಧದಲ್ಲಿಸೋಮವಾರ ನಡೆಯಿತು.

ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ”ಬರದ ಹಿನ್ನೆಲೆಯಲ್ಲಿಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಪರಿಹಾರ ವಿತರಿಸಲಾಗುವುದು,” ಎಂದು ಹೇಳಿದರು.

ವಾರದೊಳಗೆ ಪಾವತಿಗೆ ಸಿದ್ಧತೆ

”ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್‌ ಪರಿಹಾರವಾಗಿ 3,454 ಕೋಟಿ ರೂ. ರಾಜ್ಯಕ್ಕೆ ಬಂದಿತ್ತು. ಅದರಂತೆ 27.50 ಲಕ್ಷ ರೈತರಿಗೆ 2,451 ಕೋಟಿ ರೂ. ಪರಿಹಾರವನ್ನು ಮೇ ತಿಂಗಳU ಮೊದಲ ವಾರದಲ್ಲೇ ವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರಕಾರದಿಂದ 272 ಕೋಟಿ ರೂ. ಸೇರಿಸಿ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ವಾರದೊಳಗೆ ಪರಿಹಾರ ಪಾವತಿಸಲು ಅಧಿಕಾರಿಗಳು ಎಲ್ಲಸಿದ್ಧತೆ ಮಾಡಿಕೊಂಡಿದ್ದಾರೆ,” ಎಂದು ವಿವರಿಸಿದರು.

”ಸಂಪುಟ ಉಪಸಮಿತಿ ಸಭೆಯಲ್ಲಿಮುಂಗಾರು ಸ್ಥಿತಿಯ ಬಗ್ಗೆಯೂ ಅವಲೋಕಿಸಲಾಗಿದೆ. ಪೂರ್ವ ಮುಂಗಾರಿನಲ್ಲಿಸುಮಾರು 115 ಮಿ.ಮೀ. ಮಳೆಯಾಗುತ್ತಿತ್ತು. ಆದರೆ ಈ ಬಾರಿ 150 ಮಿ.ಮೀ. ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.78ರಷ್ಟು ಹೆಚ್ಚುವರಿ ಮಳೆಯಾಗಿದೆ,” ಎಂದು ಹೇಳಿದರು.

”ಕಳೆದ ವರ್ಷ ಶೇ.71ರಷ್ಟು ಮಳೆ ಕೊರತೆಯಾಗಿತ್ತು. ಈ ಬಾರಿ ಒಂದು ಭಾಗಕ್ಕೆ ಸೀಮಿತವಾಗದೆ, ಎಲ್ಲಭಾಗದಲ್ಲೂಮಳೆ ಬಂದಿದೆ. ಐದು ಜಿಲ್ಲೆಗಳಲ್ಲಿವಾಡಿಕೆಯ ಮಳೆಯಾಗಿದ್ದರೆ, ನಾಲ್ಕು ಜಿಲ್ಲೆಗಳಲ್ಲಿಅಧಿಕ ಮತ್ತು ಉಳಿದ ಜಿಲ್ಲೆಗಳಲ್ಲಿಅತ್ಯಧಿಕ ಪ್ರಮಾಣದಲ್ಲಿಮಳೆಯಾಗಿದೆ,” ಎಂದು ತಿಳಿಸಿದರು.

ವಾಡಿಕೆಗಿಂತ ಹೆಚ್ಚು ಮಳೆ: ತಜ್ಞರ ವರದಿ

”ಕೃಷಿ ವಿಮೆ ಮೂಲಕವೂ ರೈತರಿಗೆ ಈ ಬಾರಿ ಅತಿ ಹೆಚ್ಚು ಅಂದರೆ 1,654 ಕೋಟಿ ರೂ. ಪರಿಹಾರ ಸಿಕ್ಕಿದೆ. ಇನ್ನೂ 130 ಕೋಟಿ ರೂ. ಬಾಕಿ ಇದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ವರದಿ ನೀಡಿದ್ದಾರೆ. ಮಳೆ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಇದೇ ಶನಿವಾರದಿಂದ ವಿಭಾಗವಾರು ಸಭೆ ನಡೆಸುತ್ತೇನೆ,” ಎಂದೂ ಹೇಳಿದರು.

ಇತರೆ ವಿಷಯಗಳು

8th Pay Commision ಗೆ ಗ್ರೀನ್‌ ಸಿಗ್ನಲ್! ಮೋದಿ ಸರ್ಕಾರದ ಮೊದಲ ಘೋಷಣೆ

ಇನ್ಮುಂದೆ ನಿಮ್ಮ ನಿಮ್ಮ ಗ್ರಾಮಪಂಚಾಯಿತಿಗಳಲ್ಲೇ ಸಿಗಲಿದೆ ಈ ಹೊಸ ಸೌಲಭ್ಯ!


Share

Leave a Reply

Your email address will not be published. Required fields are marked *