rtgh

ರಾಜ್ಯಾದ್ಯಂತ PDO ಹುದ್ದೆಗಳ ನೇಮಕಾತಿ ಆರಂಭ.! ಡಿಗ್ರಿ ಪಾಸಾದ ಆಸಕ್ತರು ಅಪ್ಲೇ ಮಾಡಿ

Karnataka PDO Recruitment
Share

ಹಲೋ ಸ್ನೇಹಿತರೇ, ಹೈದ್ರಾಬಾದ್ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿ ಅಗತ್ಯ ಪಂಚಾಯತ್ ರಾಜ್‌ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ KPSC ಇಂದ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಅಪ್ಲೇ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

Karnataka PDO Recruitment

ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ ಇಲಾಖೆಯಡಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ – ‌PDO ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಏಪ್ರಿಲ್ 15 ರಿಂದ ಸಲ್ಲಿಸಬಹುದು.

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ ಇಲಾಖೆ
ಹುದ್ದೆ ಹೆಸರು : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ : 247 (150RPC+ 97HK)

ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ವೇತನ ಶ್ರೇಣಿ ರೂ.37,900-70,850.

ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆ

ಕನಿಷ್ಠ 18 ವರ್ಷ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವಯೋಮಿತಿ.
SE, ST, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ಅರ್ಜಿಗೆ ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿಗೆ ಪ್ರಾರಂಭಿಕ ದಿನಾಂಕ : 15-04-2024
ಆನ್‌ಲೈನ್ ಅರ್ಜಿಗೆ ಕೊನೆಯ ದಿನಾಂಕ : 15-05-2024

ಹುದ್ದೆಗೆ ಅರ್ಜಿ ಶುಲ್ಕ ವಿವರ

– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -₹600.
– ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ₹300.
– ಮಾಜಿ ಸೈನಿಕ ಅಭ್ಯರ್ಥಿಗಳಿಗೆ -₹50
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ PDO ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹೇಗಿರುತ್ತದೆ?

ಕರ್ನಾಟಕ PDO ಹುದ್ದೆಗೆ ಒಟ್ಟು 400 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಕೆಳಗಿನ ಮಾದರಿಗಳಲ್ಲಿ ನಡೆಸಲಾಗುತ್ತದೆ.
ಪತ್ರಿಕೆ-1
ಸಾಮಾನ್ಯ ಕನ್ನಡ, ಸಾಮಾನ್ಯ ಜ್ಞಾನ, ಸಾಮಾನ್ಯ ಇಂಗ್ಲಿಷ್ ಕುರಿತ 100 ಅಂಕಗಳು ಇರಲಿದ್ದು, ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಒಟ್ಟು ಪರೀಕ್ಷೆ ಅವಧಿ 2 ಗಂಟೆ. ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆ ಇರಲಿದೆ.

ಪತ್ರಿಕೆ-2
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರಲಿದೆ. ಈ ಪತ್ರಿಕೆಯು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ. 2 ಗಂಟೆಗಳ ಪರೀಕ್ಷೆ ಇರುತ್ತದೆ. ಈ ಪತ್ರಿಕೆಯು ವಸ್ತುನಿಷ್ಠ ಬಹು ಆಯ್ಕೆಯ ಪತ್ರಿಕೆಯಾಗಿರುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಯನ್ನು ಎಲ್ಲಾ ಜಿಲ್ಲಾ ಅಥವಾ ತಾಲ್ಕೂಕು ಕೇಂದ್ರಗಳಲ್ಲಿ ನಡೆಯಲಿದೆ.

ಪಿಂಚಣಿ ಸೌಲಭ್ಯ : ಸರ್ಕಾರದ ಆದೇಶ ಸಂಖ್ಯೆ- FD (SPL) 04 PET 2005, ದಿನಾಂಕ 31-03-2006 ರಂತೆ ನೀಡಲಾಗುತ್ತದೆ.

ವಿದ್ಯಾರ್ಹತೆ: ಯಾವುದೇ ಪದವಿ

ವೆಬ್‌ಸೈಟ್‌ ವಿಳಾಸ: https://www.kpsc.kar.nic.in/

ಇತರೆ ವಿಷಯಗಳು

ಪ್ರತಿ ತಿಂಗಳು ಸಿಗಲಿದೆ ಉಚಿತ ₹5,000! ಇಂದೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

6 ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ! 12,000 ಸೀಟ್‌ ಅರ್ಜಿ ಪ್ರಕ್ರಿಯೆ ಇಂದಿನಿಂದ ಆರಂಭ


Share

Leave a Reply

Your email address will not be published. Required fields are marked *