ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕೇರಳದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಶಿರಾಡಿ ಘಾಟ್ ನಲ್ಲೂ ಆಘಾತಕಾರಿ ರೀತಿಯಲ್ಲಿ ಗುಡ್ಡ ಕುಸಿದಿದೆ. ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಈ ಪ್ರದೇಶಗಳಲ್ಲಿ ಆಗಸ್ಟ್ 3 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಉಷ್ಣವಲಯದ ಚಂಡಮಾರುತವು ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ಕೇರಳದ ಕರಾವಳಿ ಪ್ರದೇಶಗಳಲ್ಲಿ ಮುಂದುವರಿಯುತ್ತದೆ ಮತ್ತು ಕರಾವಳಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಸಹ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ .! ಇಲ್ಲಿದೆ ಸೊಸೈಟಿ ಸಾಲ ಮನ್ನಾ ರೈತರ ಪಟ್ಟಿ
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 30 ರಿಂದ ಆಗಸ್ಟ್ 3 ರವರೆಗೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 30 ಮತ್ತು 31 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ, ಆಗಸ್ಟ್ 1 ರಂದು ಆರೆಂಜ್ ಅಲರ್ಟ್, ಆಗಸ್ಟ್ 2 ಮತ್ತು 3 ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಜುಲೈ 30 ರಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಜುಲೈ 31 ಮತ್ತು ಆಗಸ್ಟ್ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಆಗಸ್ಟ್ 2 ಮತ್ತು 3 ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ, ಜುಲೈ 30, 31 ರಂದು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಆಗಸ್ಟ್ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಜುಲೈ 30, 31 ಮತ್ತು ಆಗಸ್ಟ್ 1, 2 ರಂದು ಹಳದಿ ಎಚ್ಚರಿಕೆಯನ್ನು ಘೋಷಿಸಲಾಗಿದೆ. ಕರ್ನಾಟಕ ರಾಜ್ಯದಾದ್ಯಂತ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಕೇರಳದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಶಿರಾಡಿ ಘಾಟ್‌ನಲ್ಲಿಯೂ ಸಹ ಆಘಾತಕಾರಿ ರೀತಿಯಲ್ಲಿ ಗುಡ್ಡ ಕುಸಿದಿದೆ.
ಇತರೆ ವಿಷಯಗಳು
ಮನೆ ಇಲ್ಲದವರಿಗೆ ಕೇಂದ್ರದಿಂದ ಉಚಿತ ಮನೆ ಸೌಲಭ್ಯ! ಈ ರೀತಿ ಅಪ್ಲೇ ಮಾಡಿ
ಇಂದಿನಿಂದ ದೇಶಾದ್ಯಂತ ಹೊಸ ರೂಲ್ಸ್! ನಿಮ್ಮ ಜೇಬಿಗೆ ನೇರ ಹೊರೆ