rtgh
Headlines

ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ!! ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ

Karnataka Rain
Share

ಬೆಂಗಳೂರು : ರಣಬಿಸಿಲಿನ ಬೇಗೆಯಿಂದ ಕಂಗೆಟ್ಟ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಸಮಾಧಾನಕರವಾದ ಸುದ್ದಿಯನ್ನು ನೀಡಿದೆ. ರಾಜ್ಯದ ಹಲವಾರು ಕಡೆ ಏ.18 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Karnataka Rain

ಕಳೆದ ಹಲವು ದಿನಗಳಿಂದ ರಾಜ್ಯದ ಹಲವಾರು ಕಡೆಯಲ್ಲಿ ಮಳೆಯಾಗುತ್ತಿದ್ದು, ಏಪ್ರಿಲ್ 18 ರಿಂದ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಸಹ ಓದಿ: ಸರ್ಕಾರಿ ನೌಕರರ ವೇತನದಲ್ಲಿ 12,600 ರೂ.ಹೆಚ್ಚಳ.! ಡಿಎ ಜೊತೆ ಏರಿಕೆಯಾಗಲಿದೆ HRA

ಏ.18ರ ಬಳಿಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಕೋಲಾರ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಕೋಲಾರ, ಮೈಸೂರು, ಶಿವಮೊಗ್ಗ, ವಿಜಯನಗರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿಯನ್ನು ತಿಳಿಸಿದೆ.

ಕಳೆದ 2 ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ತರೀಕೆರೆ, ಬಾಳೆಹೊನ್ನೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಹಾಗೂ ಆಗುಂಬೆಯಲ್ಲಿ ಸಹ ಸಾಧಾರಣ ಮಳೆಯಾಗಿದೆ.

ಆಧಾರ್‌ ಕಾರ್ಡ್‌ ತಿದ್ದುಪಡಿಗೆ ಹೊಸ ವೆಬ್‌ಸೈಟ್! ಮನೆಯಲ್ಲಿ ಕುಳಿತು ಅಪ್ಡೇಟ್‌ ಮಾಡಿ

2nd PUC ಪಾಸಾದವರಿಗೆ ₹20,000 ಪ್ರೋತ್ಸಾಹಧನ.! ಅಪ್ಲೇ ಮಾಡಲು ಆರಂಭಿಕ ದಿನಾಂಕ?


Share

Leave a Reply

Your email address will not be published. Required fields are marked *