rtgh

2024-25ನೇ ಶೈಕ್ಷಣಿಕ ಸಾಲು: ರಾಜ್ಯದ 123 ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Karnataka Residential Schools Admission
Share

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ನಿರ್ದೇಶನಾಲಯದಡಿಯಲ್ಲಿ ಕಾರ್ಯನಿರ್ವಹಿಸುವ 123 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

Karnataka Residential Schools Admission

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿರುವ 123 ವಿವಿಧ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಇದೀಗ ಬಿಡುಗಡೆ ಮಾಡಲಾಗಿದೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ವಿವರ

  • ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು (CBSC): 29
  • ಮೊರಾರ್ಜಿ ದೇಸಾಯಿ ವಸತಿ ಶಾಲೆ 90
  • 4 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು

ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ದಾಖಲಾತಿ ಮಾಡಿಸಬೇಕೆಂದರೆ ಇಂದಿನಿಂದ ಅರ್ಜಿ ಸಲ್ಲಿಸಿ.

ಅಲ್ಪಸಂಖ್ಯಾತರ ಸಮುದಾಯದವರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳು, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್‌, ಮುಸ್ಲಿಂ, ಸಿಖ್ & ಪಾರ್ಸಿ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್‌ ಗೆ https://sevasindhu.karnataka.gov.in/ ಗೆ ಭೇಟಿ ನೀಡಿ. ಇನ್ನು ಹೆಚ್ಚಿನ ವಿವರಗಳಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ವೆಬ್‌ಸೈಟ್‌ https://dom.karnataka.gov.in ನಲ್ಲಿ ಪಡೆಯಬಹುದಾಗಿದೆ.

ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿಗೆ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 16-02-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-03-2024

ಅರ್ಹತೆಗಳು: 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿ ವಸತಿ ಶಾಲೆಗೆ ದಾಖಲಿಸಲು, ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಬಹುದಾಗಿದೆ.

ಅರ್ಜಿ ಹಾಕುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರು : ₹2,50,000
ಹಿಂದುಳಿದ ವರ್ಗದ ಪ್ರವರ್ಗ-1 : ₹2,50,000
ಹಿಂದುಳಿದ ವರ್ಗದ 2A, 2B, 3A, 3B : ₹1,00,000

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಸಹಾಯವಾಣಿ 8277799999, 080-22535902 ಸಂಪರ್ಕ ಮಾಡಿ.

ಸೂಚನೆ : ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಖಾಂತರ ಅರ್ಜಿ ಸಲ್ಲಿಸಲು ಉಚಿತ ಸೇವೆಯನ್ನು ಬಳಸಿಕೊಳ್ಳಲು ತಮ್ಮ ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು, ಡಾ. APJ ಅಬ್ದುಲ್ ಕಲಾಂ ವಸತಿ ಶಾಲೆಗಳು, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ & ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

ಆನ್‌ಲೈನ್‌ ಅರ್ಜಿ ಹಾಕುವ ವೇಳೆ SATS ಸಂಖ್ಯೆಯನ್ನು ವಿದ್ಯಾರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ ಪಡೆದು & ಮೀಸಲಾತಿಗೆ ಸಂಬಂಧಿಸಿದ ಅಗತ್ಯವಾದ ದಾಖಲೆಗಳೊಂದಿಗೆ, ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆಯ ಮುಖ್ಯಸ್ಥರನ್ನು ಸಂಪರ್ಕಿಸಬೇಕಾಗುತ್ತದೆ.

ಇತರೆ ವಿಷಯಗಳು

ಸರ್ಕಾರದಿಂದ ₹1,20,000 ಖಾತೆಗೆ ಜಮಾ! ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ

ಸರ್ಕಾರದಿಂದ ಬಂತು ಕಶ್ಯಪ ಯೋಜನೆ! ನಾಗರಿಕರಿಗೆ ಸಿಗಲಿದೆ ಪ್ರತಿ ತಿಂಗಳು ₹4,000

1.ವಸತಿ ಶಾಲೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

15-03-2024.

1. ವಸತಿ ಶಾಲೆಗೆ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ್‌ ಯಾವಾಗ?

16-02-2024.


Share

Leave a Reply

Your email address will not be published. Required fields are marked *