ಹಲೋ ಸ್ನೇಹಿತರೇ, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಣೆ ಮಾಡಲಾಗಿದೆ. ಎಲ್ಲಾ ಅಂಗನವಾಡಿಗಳು & ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಯಾವ ಯಾವ ಜಿಲ್ಲೆಗಳಿಗೆ ರಜೆ ಘೋಷಣೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ.
ಜೂನ್ 27 ರಂದು ಕರಾವಳಿ ಕರ್ನಾಟಕಕ್ಕೆ IMD ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು & ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದೇಶದ ಪ್ರಕಾರ, ಅಂಗನವಾಡಿಗಳು, ಸರ್ಕಾರಿ, ಅನುದಾನಿತ & ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರಂದು ಮಂಗಳೂರಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ. ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಮುದ್ರ ತೀರ / ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಭೂಕುಸಿತಕ್ಕೆ ಒಳಗಾಗುವ ಹಲವಾರು ಪ್ರದೇಶಗಳನ್ನು ಗುರುತಿಸಲಾಗಿದೆ. ಅಪಾಯಗಳನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ತಗ್ಗು ಪ್ರದೇಶಗಳು, ಕೊಳಗಳು, ನದಿಗಳು ಮತ್ತು ಸಮುದ್ರ ತೀರದಂತಹ ಜಲಮೂಲಗಳ ಭೇಡಿಯನ್ನು ತಪ್ಪಿಸುವಂತೆ ನಿವಾಸಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶದಲ್ಲಿ ತಿಳಿಸಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಿಗೆ IMD ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಲಾಗಿದೆ. ಗುರುವಾರ ಕರಾವಳಿ ಕರ್ನಾಟಕದಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೂನ್ 28 ರಿಂದ ಜೂನ್ 30 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
ಇತರೆ ವಿಷಯಗಳು
ಜುಲೈ 1 ರಿಂದ ಸ್ಮಾರ್ಟ್ ಟ್ರಾಫಿಕ್ ವ್ಯವಸ್ಥೆಗೆ ಭರ್ಜರಿ ಚಾಲನೆ!
ಪೇಟಿಎಂ ಬೃಹತ್ ಉದ್ಯೋಗಾವಕಾಶ: ಯಾವುದೇ ಪರೀಕ್ಷೆ ಇಲ್ಲದೆ ನೇರ ಆಯ್ಕೆ