rtgh
Headlines

ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ

krishi bhagya subsidy
Share

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಹಾಯಧನ ಪಡೆದುಕೊಳ್ಳಬೇಕೆ..? ಹಾಗಿದ್ದರೇ ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

krishi bhagya subsidy

2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೂಡ ಕೃಷಿ ಚಟುವಟಿಕೆ ಕೈಗೊಳ್ಳಲು ಈ ಯೋಜನೆ ಅನುಕೂಲ ಕಲ್ಪಿಸಿಕೊಡುತ್ತದೆ.

ಕೃಷಿ ಭಾಗ್ಯ ಯೋಜನೆ 2024

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ, ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿಯ ನಿರ್ಮಾಣ, ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್ ಖರೀದಿಗೆ ಅವಕಾಶ, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರು, ಹನಿ ನೀರಾವರಿ ಘಟಕ ಅನುಷ್ಠಾನಕ್ಕೆ ಸಹಾಯಧನ ನೀಡಲಾಗುವುದು.

ಕೃಷಿ ಭಾಗ್ಯ ಪ್ಯಾಕೇಜ್‌ನಲ್ಲಿ ಈ ಕೆಳಕಂಡ ಘಟಕಗಳು ಒಳಗೊಂಡಿದ್ದು, ಯೋಜನೆಯ ಸಮಗ್ರ ಸದುಪಯೋಗ ಪಡೆದುಕೊಳ್ಳಲು ರೈತ ಬಾಂಧವರಲ್ಲಿ ವಿನಂತಿ ಎಂದು ಸರ್ಕಾರದಿಂದ ತಿಳಿಸಿದೆ.

  1. ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್.
  2. ಕೃಷಿ ಹೊಂಡ ನಿರ್ಮಾಣ.
  3. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ.
  4. ಕ್ಷೇತ್ರ ಬದು ನಿರ್ಮಾಣ.
  5. ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ

ದಾಖಲೆಗಳು:

  • ರೈತರ ಭಾವಚಿತ್ರ
  • ರೈತರ ಅರ್ಜಿ
  • FID (FID ಇಲ್ಲವಾದಲ್ಲಿ ಆಧಾ‌ರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಪಹಣಿ ಪ್ರತಿ ಮತ್ತು ಬ್ಯಾಂಕ್ ಪಾಸ್ ಬುಕ್ ಪ್ರತಿ)

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆ ಅನ್ವಯ ಮತ್ತು ಹೋಬಳಿಗೆ ನಿಗದಿಪಡಿಸಿದ ಗುರಿಯ ಅನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು ಎಂದು ಕೃಷಿ ಇಲಾಖೆ ಹೇಳಿದೆ.

ಇತರೆ ವಿಷಯಗಳು.

ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ! ಹೊಸ ವೇಳಾಪಟ್ಟಿ ಇಲ್ಲಿದೆ

ಈ 3 ದಿನಗಳ ಕಾಲ ಬಲವಾದ ಗಾಳಿಯೊಂದಿಗೆ ಮಳೆ ಎಚ್ಚರ


Share

Leave a Reply

Your email address will not be published. Required fields are marked *