rtgh
Headlines

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.! ಸಾರಿಗೆ ಸಂಸ್ಥೆ ಹೊಸ ಸುತ್ತೋಲೆ

ksrtc new circular
Share

ಹಲೋ ಸ್ನೇಹಿತರೇ, ಕ.ರಾ.ರ.ಸಾ.ನಿಗಮವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಡೆಯುವ ದಿನಾಂಕಗಳಂದು ಅಂದ್ರೆ ದಿನಾಂಕ 25.03.2024 ರಿಂದ 06.04,2024 ರವರೆಗೆ ಪರೀಕ್ಷೆಗೆ ಹಾಜರಾಗುವ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತವಾದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಹಾಗೂ ಹಿಂದಿರುಗುವಾಗ “ಎಸ್ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತ ಬಸ್ ಪಾಸ್ ಪಡೆದು ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ksrtc new circular

ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಮತ್ತು ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತವಾದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.

5,8,9 ನೇ ತರಗತಿ ಬೋರ್ಡ್‌ ಎಕ್ಸಾಮ್‌.! ಹೊಸ ಆದೇಶ ಪ್ರಕಟಿಸಿದ ರಾಜ್ಯ ಶಿಕ್ಷಣ ಇಲಾಖೆ

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಕೆಎಸ್ ಆರ್ ಟಿಸಿ ಸುತ್ತೋಲೆ ಹೊರಡಿಸಿದೆ.

ವಾಹನ ಸವಾರರಿಗೆ ಕೇಂದ್ರದ ಗಿಫ್ಟ್.‌!! ಅಂತೂ ಇಳಿಕೆ ಕಂಡ ಪೆಟ್ರೋಲ್‌-ಡೀಸೆಲ್‌ ಬೆಲೆ

ಮಾರ್ಚ್ ತಿಂಗಳ ಎಲ್ಲಾ ಬಗ್ಗೆಯ ಪಿಂಚಣಿ ಹಣ ರಿಲೀಸ್! ನಿಮ್ಮ ಖಾತೆಗೂ ಬಂತಾ ಚೆಕ್‌ ಮಾಡಿ


Share

Leave a Reply

Your email address will not be published. Required fields are marked *