ಹಲೋ ಸ್ನೇಹಿತರೇ, 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕ ಮಂಡಳಿಯು ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಮಾಸಿಕ ಪಿಂಚಣಿಯನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ನೀವು ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಬದುಕನ್ನು ಹಸನಾಗಿಸಿಕೊಳ್ಳಬಹುದು. ಕಾರ್ಮಿಕ ಕಲ್ಯಾಣದ ಸಂಕಲ್ಪ ತೊಟ್ಟಿರುವ ಕಾರ್ಮಿಕ ಇಲಾಖೆಯು ಹಲವು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಆದರೆ, ಈ ಯೋಜನೆಗಳ ಸದುಪಯೋಗ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ ಅನುಸಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ಮಂಡಳಿಯ ಫಲಾನುಭವಿಗಳಾಗಿ ನೋಂದಣಿ ಮಾಡಲಾಗುತ್ತಿದೆ. ಮಂಡಳಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಯೋಜನೆಯಡಿ ನೀಡಲಾಗುವ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳ ಸಮರ್ಪಕ ವಿತರಣೆ ಮಾಡುವುದಕ್ಕೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ 1996 ಹಾಗೂ ಸುಂಕ ನಿಯಮಗಳ ಅಡಿಯಲ್ಲಿ ಮಂಡಳಿಗೆ ಸುಂಕದ ರೂಪದ ಆರ್ಥಿಕ ಸಂಪನ್ಮೂಲವನ್ನು ಸಂಗ್ರಹಿಸುವುದು ಸಹ ಉದ್ದೇಶವಾಗಿರುತ್ತದೆ.
ಇದನ್ನೂ ಸಹ ಓದಿ : ರೈತರ 1 ಲಕ್ಷದವರೆಗಿನ ಕೃಷಿ ಸಾಲಕ್ಕೆ ಪರಿಹಾರ!
ನೋಂದಣಿಗೆ ಅರ್ಹತೆಗಳೇನು?
ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ವರ್ಗದಲ್ಲಿ ನೋಂದಣಿ ಮಾಡಿಕೊಳ್ಳಲು ಸರಕಾರ ಕೆಲವು ಷರತ್ತುಗಳನ್ನು ವಿಧಿಸಿದೆ. ಇದರ ಅನ್ವಯ ಒಬ್ಬ ಫಲಾನುಭವಿಯು ನೋಂದಾಣಿಯಾಗಬೇಕಾದರೆ, ಅಂತಹ ವ್ಯಕ್ತಿಯು ವರ್ಷದಲ್ಲಿ ಅಥವಾ 12 ತಿಂಗಳಲ್ಲಿ ಕಟ್ಟಡ ಅಥವಾ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳು ಕೆಲಸ ನಿರ್ವಹಿಸಿರಬೇಕು. ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:
- ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
- ಫಲಾನುಭವಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ
- ಜೀವಿತ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಆಧಾರ್ ಕಾರ್ಡ್ ಪ್ರತಿ
- ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಇತರೆ ವಿಷಯಗಳು:
ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪೋಷಕರ ಖಾತೆಗೆ 22 ಲಕ್ಷ..!
ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗಾಗಿ ಉಚಿತ ಕಿಟ್ ಯೋಜನೆ ಮರು ಆರಂಭ!
ಜಿಯೋ ಬಳಕೆದಾರರಿಗೆ ಒಳ್ಳೆಯ ಸುದ್ದಿ! ರೀಚಾರ್ಜ್ ಬೆಲೆಯಲ್ಲಿ ಮತ್ತೆ ಬದಲಾವಣೆ