rtgh

ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ‘ಕಾನೂನು ಕ್ರಮ ಫಿಕ್ಸ್’! ಖಡಕ್‌ ಎಚ್ಚರಿಕೆ ನೀಡಿದ ಸರ್ಕಾರ

Legal action for unscientific road works
Share

ಹಲೋ ಸ್ನೇಹಿತರೇ, ರಾಜ್ಯದಲ್ಲಿ ರಸ್ತೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮಾಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಮಾಡಿದ್ದೇ ಆದರೇ ಅಂತ ಗುತ್ತಿಗೆದಾರರು, ಇಂಜಿನಿಯರ್ ಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿದೆ.

Legal action for unscientific road works

ಈ ಕುರಿತಂತೆ ಮಾತನಾಡಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪಶ್ಚಿಮ ಘಟ್ಟದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್‌ ನೀಡಿ ಕ್ರಮ ಜರುಗಿಸಲು ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಆನೆಗಳು ನಾಡಿಗೆ ಬಂದಾಗ ಅವುಗಳನ್ನು ಮರಳಿ ಕಾಡಿಗೆ ಕಳುಹಿಸಲು ರಾಪಿಡ್ ರೆಸ್ಪಾನ್ಸ್ ಟೀಮ್ -ಆರ್.ಆರ್.ಟಿ. ಅಂದರೆ ಕ್ಷಿಪ್ರ ಸ್ಪಂದನಾ ಪಡೆಗಳು, ಎಲಿಫೆಂಟ್ ಟಾಸ್ಕ್ ಫೋರ್ಸ್ -ಇ.ಟಿ.ಎಫ್. ಅಂದರೆ ಆನೆ ಕಾರ್ಯ ಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಈಶ್ವರ ಖಂಡ್ರೆ, ತಾವು ಅರಣ್ಯ ಸಚಿವರಾದ ತರುವಾಯ ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಎರಡು ಆನೆ ಕಾರ್ಯಪಡೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಿದ್ದಾಗಿ ತಿಳಿಸಿದರು.

ಪ್ರಸ್ತುತ ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ, ಆನೆಗಳ ಚಲನ ವಲನದ ಬಗ್ಗೆ ಜನರಿಗೆ ಎಸ್.ಎಂ.ಎಸ್., ವಾಟ್ಸ್ ಅಪ್ ಸಂದೇಶದ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಸಹ ಓದಿ : ವಾಹನ ಸವಾರರೇ ಹುಷಾರ್..!‌ ಇನ್ಮುಂದೆ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಆನೆಗಳು ಸಾಮಾನ್ಯವಾಗಿ ಆಹಾರ ಮತ್ತು ನೀರು ಅರಸಿ ನಾಡಿಗೆ ಬರುತ್ತಿವೆ. ಹೀಗಾಗಿ ಅರಣ್ಯದೊಳಗೆ ವನ್ಯ ಜೀವಿಗಳಿಗೆ ಅದರಲ್ಲೂ ಆನೆಗಳಿಗೆ ಅಗತ್ಯ ಆಹಾರ, ನೀರು ಸಿಗುತ್ತಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಕ್ರಮ ವಹಿಸಲಾಗಿದೆ. ಕಳೆದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾದಾಗ, ಅರಣ್ಯ ಪ್ರದೇಶದೊಳಗಿನ ನೀರುಗುಂಡಿ ಅಂದರೆ ವಾಟರ್ ಹೋಲ್ ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ಕೊಳವೆ ಬಾವಿಗಳಿಗೆ ಅಳವಡಿಸಲಾದ ಸೌರ ಪಂಪ್ ಗಳ ಮೂಲಕ ನಿರಂತರವಾಗಿ ನೀರು ಲಭ್ಯವಾಗುವಂತೆ ಮಾಡಲಾಯಿತು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ನಾಗರಹೊಳೆ, ಬಂಡೀಪುರ, ಬಿಆರ್.ಟಿ. ಮೊದಲಾದ ಕಡೆಗಳಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ ಲಾಂಟನಾ, ಸನ್ನಾದಂತಹ ಕಳೆಯಿಂದಲೂ ಆನೆಗಳಿಗೆ ಹುಲ್ಲು, ತೊಗಟೆ, ಎಲೆ, ಸೊಪ್ಪು ಮತ್ತು ನೀರು ಸರ್ವ ಋತುವಿನಲ್ಲೂ ಲಭ್ಯವಾಗುವಂತೆ ಮಾಡಲು ಮತ್ತು ಲಾಂಟನಾ ಕಳೆ ನಿರ್ಮೂಲನೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದೂ ವಿವರ ನೀಡಿದರು.

ಇತರೆ ವಿಷಯಗಳು:

FASTag ಬಳಕೆದಾರರ ಈ ಕೆಲಸಕ್ಕೆ ಅಕ್ಟೋಬರ್ 31 ಕೊನೆಯ ದಿನಾಂಕ..!

ಗೃಹಲಕ್ಷ್ಮಿ ಹಣ ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ? ಡಿಕೆ ಶಿವಕುಮಾರ್ ಬಿಗ್​ ಅಪ್ಡೇಟ್​

ದಾವಣಗೆರೆ ಜಿಲ್ಲಾ ಪಂಚಾಯತಿ ನೇಮಕಾತಿ.! ಆಸಕ್ತ ಅಭ್ಯರ್ಥಿಗಳು ತಕ್ಷಣ ಅಪ್ಲೇ ಮಾಡಿ


Share

Leave a Reply

Your email address will not be published. Required fields are marked *