ಹಲೋ ಸ್ನೇಹಿತರೇ, ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಆರಂಭಿಸುತ್ತಿದ್ದು, ಇಂದು ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹಂತ-ಹಂತವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ (LKG & UNG) ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಅದರಂತೆ, ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (LKG & UKG) ಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ಉತ್ತರ ಜಿಲ್ಲೆಯ 62, ಪೂರ್ವ ಜಿಲ್ಲೆಯ 20, ಕೇಂದ್ರ ಜಿಲ್ಲೆಯ 50, ಬೆಂಗಳೂರು ರಾಜ್ಯ (ಪ್ರೊಜೆಕ್ಟ್) 50, ಬೆಂಗಳೂರು ದಕ್ಷಿಣ 48, ಆನೆಕಲ್ 20 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 1,238 ಗಂಡು ಹಾಗೂ 1,203 ಹೆಣ್ಣು ಮಕ್ಕಳು ಸೇರಿ ಒಟ್ಟೂ 2,441 ಮಕ್ಕಳು ಇದರಲ್ಲಿ ಒಳಗೊಳ್ಳಲಿದ್ದಾರೆ.
ಇದನ್ನೂ ಸಹ ಓದಿ : ಜಿಯೋ ಬಳಕೆದಾರರಿಗೆ ಒಳ್ಳೆಯ ಸುದ್ದಿ! ರೀಚಾರ್ಜ್ ಬೆಲೆಯಲ್ಲಿ ಮತ್ತೆ ಬದಲಾವಣೆ
04 ರಿಂದ 06 ವರ್ಷದ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಪಠ್ಯ, ಪುಸ್ತಕ (ಆಂಗ್ಲ ಹಾಗೂ ಕನ್ನಡ ಮಾಧ್ಯಮ) ನೀಡಲು, 1 ಜೊತೆ ಸಮವಸ್ತ್ರ ನೀಡಲು, 1 ಬ್ಯಾಗ್ ಮತ್ತು ಪೆನ್ಸಿಲ್ ಬಾಕ್ಸ್ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ ಸಿಎಸ್‌ಆರ್ ಫಂಡ್ ಪಡೆಯಲು ಉದ್ದೇಶಿಸಲಾಗಿದೆ. LKG & UKG -ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರತಿ ದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಸಲು ಉದ್ದೇಶಿಸಲಾಗಿದೆ.
ಪೂರ್ವ ಪ್ರಾಥಮಿಕ ಕೇಂದ್ರಗಳಲ್ಲಿ ಹಾಲಿ PUC ಮತ್ತು ಪದವಿ / ಸ್ನಾತಕೋತ್ರದ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಗುರುತಿಸಲಾಗಿದೆ. ಆಂಗ್ಲ ಹಾಗೂ ಕನ್ನಡ ಮಾಧ್ಯಮಗಳಲ್ಲಿ ಬೋಧನೆ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇತರೆ ವಿಷಯಗಳು:
ಡೆಂಗ್ಯೂ ಮುಂಜಾಗ್ರತೆ ರೀಲ್ಸ್ ಮಾಡಿದ್ರೆ ಸಿಗತ್ತೆ ಲಕ್ಷ ರೂಪಾಯಿ ಬಹುಮಾನ! BBMP ಆಫರ್
ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪೋಷಕರ ಖಾತೆಗೆ 22 ಲಕ್ಷ..!
ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗಾಗಿ ಉಚಿತ ಕಿಟ್ ಯೋಜನೆ ಮರು ಆರಂಭ!