ಹಲೋ ಸ್ನೇಹಿತರೇ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದೆ ಪ್ರಧಾನಿ ಮೋದಿ ದೇಶದ ಮಹಿಳೆಯರಿಗೆ ಉಡುಗೊರೆ ನೀಡಿದ್ದು, ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.
‘ಈ ಮಹಿಳಾ ದಿನದಂದು, ನಮ್ಮ ಬಿಜೆಪಿ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿಗಳನ್ನು ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ.
ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ಬಯಸುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.
ಇತರೆ ವಿಷಯಗಳು
ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದೀರಾ? ಹಾಗಿದ್ದರೆ ಇಲ್ಲಿಂದಲೇ ನಿಮ್ಮ ಅರ್ಜಿ ಸ್ಟೇಟಸ್ ಚೆಕ್ ಮಾಡಿ
ನಿರುದ್ಯೋಗಿಗಳಿಗೆ ಸಿಹಿ ಸುದ್ದಿ! ಈ ಪ್ರಮಾಣಪತ್ರವಿದ್ದರೆ ರೈಲ್ವೆ ಹುದ್ದೆಗೆ ನೇರ ನೇಮಕಾತಿ