rtgh
Headlines

ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾರದಲ್ಲಿ 2 ಗಂಟೆ ವಿಶೇಷ ಕಾರ್ಯಕ್ರಮ! ಶಿಕ್ಷಣ ಇಲಾಖೆ ಆದೇಶ

navu manujaru program
Share

ಹಲೋ ಸ್ನೇಹಿತರೇ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾರದಲ್ಲಿ 2 ಗಂಟೆ ‘ನಾವು ಮನುಜರು’ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನಾವು ಮನುಜರು ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಾರದಲ್ಲಿ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಬೇಕು.

navu manujaru program

ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು-ಮನುಜರು’ ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ.

ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ ಒಂದು ಅವಧಿ ಮತ್ತು ಉಳಿದ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಸಹ ಓದಿ : ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿ

ಉದ್ದೇಶವೇನು?

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆ ಬೆಳೆಸುವುದು.

ಚಟುವಟಿಕೆ ಆಧಾರಿತ ಕಲಿಕೆಗೆ ಪ್ರೋತ್ಸಾಹಿಸುವುದು.

ಸ್ಥಳೀಯ ಮೌಡ್ಯಗಳನ್ನು ನಿವಾರಣೆ ಮಾಡುವ ಬಗ್ಗೆ ಚರ್ಚಿಸುವುದು.

ಮನೆಮದ್ದು, ಸ್ಥಳೀಯ ಔಷಧಗಳ ಬಗ್ಗೆ ಪರಿಚಯಿಸುವುದು.

ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು.

ಇತರೆ ವಿಷಯಗಳು:

ಮೋದಿ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್.! ಪ್ರತಿಯೊಬ್ಬರಿಗೂ ನೇರ 10 ಲಕ್ಷ

BPL ಕಾರ್ಡ್‌ ರದ್ದುಗೊಳಿಸುವಂತೆ ಸಿಎಂ ಸೂಚನೆ..!

ಕೇಂದ್ರ ಸರ್ಕಾರದ ಹೊಸ ಯೋಜನೆ! ಪ್ರತಿ ತಿಂಗಳು ಮಹಿಳೆಯರ ಖಾತೆಗೆ ₹5000


Share

Leave a Reply

Your email address will not be published. Required fields are marked *