ಹಲೋ ಸ್ನೇಹಿತರೇ, ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 777 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ.
ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ. ಇದು ಕಾನೂನಾತ್ಮಕ ವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದರು.
ಇದನ್ನೂ ಸಹ ಓದಿ : ಆಗಸ್ಟ್ 1 ರಿಂದ ಈ ಹೊಸ ನಿಯಮಗಳು! ಏನೆಲ್ಲಾ ಬದಲಾಗಲಿದೆ ಗೊತ್ತ?
ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770 ಕೋಟಿ ಹಣವನ್ನು ಮೀಸಲಿರಿಸಲಾಗಿದೆ. ಮಂಡ್ಯ ಜಿಲ್ಲೆಗೂ ಸಹ 20 ಕೋಟಿ ಹಣ ನೀಡಲಾಗಿದೆ. ಎಲ್ಲಾ ತಾಲ್ಲೂಕುಗಳಿಗೆ 25 ಲಕ್ಷ ರೂ ನೀಡಲಾಗಿದೆ ಎಂದರು. ಸಣ್ಣ ಪುಟ್ಟ ತೊಂದರೆಯಾದಾಗ ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್ ಡಿ ಆರ್ ಎಫ್ ತಂಡಕ್ಕೆ ಆಹ್ವಾನ ನೀಡಬೇಕಿದೆ ಎಂದರು.
“ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು ₹777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ ₹23 ಕೋಟಿ ನೀಡಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇತರೆ ವಿಷಯಗಳು:
ಆಗಸ್ಟ್ 1 ರಿಂದ ಈ ಹೊಸ ನಿಯಮಗಳು! ಏನೆಲ್ಲಾ ಬದಲಾಗಲಿದೆ ಗೊತ್ತ?
ಮಳೆಯಿಂದಾದ ನಷ್ಟಕ್ಕೆ 775 ಕೋಟಿ ಅನುದಾನ.! ತಕ್ಷಣ ಪರಿಹಾರಕ್ಕೆ ಈ ಕಚೇರಿಗೆ ಬೇಟಿ ನೀಡಿ
ಸರ್ಕಾರಿ ನೌಕರರಿಗೆ ಹೊಸ ಯೋಜನೆ.! ಆಗಸ್ಟ್‌ನಿಂದ ಸಿಗಲಿದೆ ಈ ಉಚಿತ ಭಾಗ್ಯ