rtgh
Headlines

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ಹೊಸ ಕೃಷಿ ಯೋಜನೆ ಜಾರಿಗೆ ಸರ್ಕಾರದ ಸಿದ್ಧತೆ

New Agricultural Scheme
Share

ಬೆಂಗಳೂರು: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಯನ್ನು ಜೂನ್ 20ರೊಳಗೆ ಜಾರಿಗೊಳಿಸಲು ಕ್ರಮವನ್ನು ಕೈಗೊಳ್ಳುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

New Agricultural Scheme

ವಿಧಾನಸೌಧದಲ್ಲಿ ಗುರುವಾರ ಕೃಷಿ ಇಲಾಖೆಯ ಹೊಸ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆಯನ್ನು ನಡೆಸಿದ್ದಾರೆ.

ಪ್ರಸಕ್ತ ಬಜೆಟ್ ನಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರ ಆದೇಶವನ್ನು ಹೊರಡಿಸಿದ್ದು, ಬಾಕಿ ಇರುವ ಘೋಷಣೆಗಳಿಗೆ ವಾರದೊಳಗೆ ಆದೇಶವನ್ನು ಹೊರಡಿಸಿ ಕಾರ್ಯಕ್ರಮವನ್ನು ಜಾರಿಗೊಳಿಸುವಂತೆ ಮಾಹಿತಿಯನ್ನು ನೀಡಿದೆ.

ಕೃಷಿ ಕ್ಷೇತ್ರವನ್ನು ಸುಸ್ಥಿರ ಮತ್ತು ಲಾಭದಾಯಕವಾಗಿ ಮಾಡಲು ರೈತರ ಸಮೃದ್ಧಿ ಯೋಜನೆಯನ್ನು ರೂಪಿಸಿದ್ದು, ಸಮರ್ಪಕವಾಗಿ ರೈತರಿಗೆ ತಲುಪಿಸಲು ಕ್ರಮವನ್ನು ಕೈಗೊಳ್ಳಬೇಕೆಂದು ಸೂಚನೆಯನ್ನು ನೀಡಿದ್ದಾರೆ.

ಕರ್ನಾಟಕ ರೈತ ಸಮೃದ್ಧಿ ಯೋಜನೆ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ ಬ್ಯಾಂಕ್ ಸ್ಥಾಪನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು:

ಭತ್ತ ಬೆಳೆಯುವ ರೈತರು ಈ ಯೋಜನೆಯಡಿ ಹೆಸರು ನೋಂದಾಯಿಸಲು ಸೂಚನೆ!

ಉದ್ಯೋಗ ಹುಡುಕುವವರಿಗೆ ಸಿಹಿ ಸುದ್ದಿ! UPSC ಯಲ್ಲಿ 300+ ಖಾಲಿ ಹುದ್ದೆಗಳ ಭರ್ತಿ


Share

Leave a Reply

Your email address will not be published. Required fields are marked *