rtgh
Headlines

ಅಕ್ರಮ ರೆಸಾರ್ಟ್, ಹೋಮ್‌ ಸ್ಟೇ ತೆರವಿಗೆ ಸೂಚನೆ! ಸಚಿವ ಈಶ್ವರ್ ಖಂಡ್ರೆ

Notice to vacate illegal resort, home stay
Share

ಹಲೋ ಸ್ನೇಹಿತರೇ, ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್‌ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

Notice to vacate illegal resort, home stay

ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.

ಇದನ್ನೂ ಸಹ ಓದಿ : ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ..! ರಿಲೀಫ್‌ ಬೆನ್ನಲ್ಲೇ ಮತ್ತೆ ಶಾಕ್

ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದೆ. ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು:

ಇನ್ಮುಂದೆ ಪಿಂಚಣಿದಾರರಿಗೆ ಮಾಸಿಕ 7500 ರೂ. ಕನಿಷ್ಠ ಪೆನ್ಷನ್! ಕೇಂದ್ರದ ಭರವಸೆ

ದಿಢೀರ್‌ ದುಪ್ಪಟ್ಟಾದ LPG ಸಿಲಿಂಡರ್‌ ಬೆಲೆ..!

ಸರ್ಕಾರಿ ನೌಕರರ ತುಟ್ಟಿ ಭತ್ಯೆಯಲ್ಲಿ ಶೇ.3ರಷ್ಟು ಏರಿಕೆ.!


Share

Leave a Reply

Your email address will not be published. Required fields are marked *