rtgh
Headlines

ಅಡಿಕೆ ಬೆಳೆಯುವ ರೈತರಿಗೆ ಗುಡ್‌ ನ್ಯೂಸ್!‌ ಜಿಎಸ್‌ಟಿ ಹೊರೆ ಇಳಿಕೆ?

Nut farmer
Share

ಹಲೋ ಸ್ನೇಹಿತರೆ, ಅಡಿಕೆ ಮಾರುಕಟ್ಟೆಯ ಬೆಳವಣಿಗೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಕಂಪನಿಯು ಮನವಿ ಮಾಡಿದೆ. ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ.2ಕ್ಕೆ ಇಳಿಸಬೇಕು ಕೋರಿಕೆ ಇಟ್ಟಿದೆ.

Nut farmer

ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ಹೆಚ್ಚು ವ್ಯವಹರಿಸಲು ಉತ್ತೇಜನ ಸಿಗಲಿದೆ. ತೆರಿಗೆಯ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ಈ ತೆರಿಗೆಯಿಂದ ಆದಾಯ ಹೆಚ್ಚಾಗಲಿದೆ. ಸಿಜಿಎಸ್‌ಟಿ, ಎಸ್‌ಜಿಎಸ್‌ಟಿ ಮತ್ತು ಐಜಿಎಸ್‌ಟಿ ಮುಂತಾದ ಬಹು ರೀತಿಯ ತೆರಿಗೆಯ ಬದಲು ಸರಳ ಮತ್ತು ಏಕೀಕೃತ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿ ಸರಳಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ 10 ಲಕ್ಷ.! ಯೋಜನೆಗೆ ಇಲ್ಲಿಂದ ಅಪ್ಲೇ ಮಾಡಿ

ಮೈಲುತುತ್ತುದ ಮೇಲಿನ ಜಿಎಸ್‌ಟಿಯನ್ನೂ ಶೇ. 18ರಿಂದ ಶೇ. 5ಕ್ಕೆ ಇಳಿಸಬೇಕು, ಕಾರ್ಬನ್‌ ಫೈಬರ್‌ ದೋಟಿಯ ಆಮದು ಸುಂಕವನ್ನು ಕಡಿಮೆಗೊಳಿಸಬೇಕು. ಈ ಉತ್ಪನ್ನದ ಮೇಲೆ ಸರಾಸರಿ ಶೇ. 48 ಆಮದು ಸುಂಕ ವಿಧಿಸಲಾಗುತ್ತಿದೆ. ಇದರಿಂದ ಸಾಮಾನ್ಯ ರೈತರಿಗೆ ಇದರ ಲಾಭ ಕೈಗೆಟುಕುತ್ತಿಲ್ಲ. ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದನ್ನು ತಡೆಗಟ್ಟಬೇಕು. ವಶಪಡಿಸಿಕೊಂಡಿರುವ ಅಕ್ರಮ ಆಮದು ಅಡಿಕೆಗೆ ಕನಿಷ್ಠ ಬೆಲೆ ನಿಗದಿ ಮಾಡಬೇಕು. ಎಲ್ಲ ದೊಡ್ಡ ಸರಕು ವಾಹನಗಳಿಗೆ ಜಿಪಿಎಸ್‌ ವ್ಯವಸ್ಥೆ ಅಳವಡಿಸಬೇಕು ಮತ್ತು ತಪಾಸಣ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾ ಅಳವಡಿಕೆ ಮಾಡಿ ತಪಾಸಣೆ ನಡೆಸಿ ಅಕ್ರಮ ವ್ಯವಹಾರವನ್ನು ತಡೆಯಬೇಕು.

ಅಡಿಕೆಯು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದು, ದೇಶದಲ್ಲಿ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಜನರ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇದರಿಂದಾಗಿ ಅಡಿಕೆಯ ವಿವಿಧ ಉಪಯೋಗಗಳ ಅನ್ವೇಷಣೆಗೆ ಮತ್ತು ಅಡಿಕೆಗೆ ಬಾಧಿಸುತ್ತಿರುವ ರೋಗಗಳನ್ನು ತಡೆಗಟ್ಟಲು ವಿವಿಧ ಸಂಶೋಧನೆಯನ್ನು ನಡೆಸಲು ಸಾಕಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇತರೆ ವಿಷಯಗಳು:

ʻಯುವನಿಧಿʼ ಫಲಾನುಭವಿಗಳು 25 ನೇ ತಾರೀಖಿನೊಳಗೆ ತಪ್ಪದೇ ಈ ಕೆಲಸ ಮಾಡಿ!

ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರಿಗೆ ಬಿಗ್‌ ಶಾಕ್!


Share

Leave a Reply

Your email address will not be published. Required fields are marked *