rtgh
Headlines

ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌! ವಾರವಿಡೀ ಹೊಸ ಸೌಲಭ್ಯಕ್ಕೆ ಚಾಲನೆ

Nutritious food for school children
Share

ಹಲೋ ಸ್ನೇಹಿತರೆ, ಸರ್ಕಾರವು ರಾಜ್ಯದ ಶಾಲಾ ಮಕ್ಕಳಿಗೆ ಪೌಷ್ಠಿಕತೆಯ ಕೊರತೆ ನೀಗಿಸಲು ವಾರದಲ್ಲಿ 6 ದಿನವೂ ಮಕ್ಕಳಿಗೆ ಪೂರಕ ಪೌಷ್ಠಿಕ ಭರಿತ ಆಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ನಾಳೆಯಿಂದಲೇ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನ ಉಚಿತವಾಗಿ ವಿತರಿಸುವಂತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.

Nutritious food for school children

ಇದಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ- ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲಾ ಮಕ್ಕಳ ಪೌಷ್ಠಿಕತೆ ಹೆಚ್ಚಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪೂರಕವಾದ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನಗಳು ಉಚಿತವಾಗಿ ನೀಡುವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ: 20.07.2024 ರಂದು ಬೆಳಿಗ್ಗೆ 10.30 ನಡೆಯಲಿದೆ ಎಂದಿದ್ದಾರೆ.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಎಸ್.ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿಜ್ವಾನ್ ಅರ್ಷದ್, ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ ರವರು ವಹಿಸಲಿದ್ದಾರೆ ಅಂತ ಮಾಹಿತಿ ತಿಳಿಸಿದ್ದಾರೆ.

ಇತರೆ ವಿಷಯಗಳು:

ಮನೆಯಲ್ಲಿ ಚಿನ್ನ ಸಂಗ್ರಹಕ್ಕೆ ಹೊಸ ಮಿತಿ ನಿಗದಿ..!

ʻಡಿಗ್ರಿʼ ಪಾಸಾದವರಿಗೆ ಬ್ಯಾಂಕ್‌ ನಲ್ಲಿ ಉದ್ಯೋಗಾವಕಾಶ! 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ


Share

Leave a Reply

Your email address will not be published. Required fields are marked *