rtgh
Headlines

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್! ಹಳೆ ಪಿಂಚಣಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ

old pension scheme update
Share

ಹಲೋ ಸ್ನೇಹಿತರೇ, ಹಳೆ ಪಿಂಚಣಿ ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

old pension scheme update

01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು.

ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ. ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ರಾಜ್ಯ ಸರ್ಕಾರ ವಿಧಿಸಿದ ಷರತ್ತುಗಳು ಏನು?

ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.

ಇದನ್ನೂ ಸಹ ಓದಿ : ರಾಜ್ಯದ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೂ ಬಂದಿದ್ಯಾ ಚೆಕ್ ಮಾಡಿ

ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ. ಒಂದು ವೇಳೆ ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ಮೇಲೆ ಹೇಳಲಾದ ಆಯ್ಕೆಯನ್ನು ಮಾಡಿಕೊಳ್ಳದೆ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ.

ದಿನಾಂಕ 01.04.2006 ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಹಾಗೂ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ.

ಹೀಗಾಗಿ ಇಚ್ಛೆಯುಳ್ಳ ಎಲ್ಲ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಅನುಬಂಧದ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.

ಇತರೆ ವಿಷಯಗಳು:

ರೇಷನ್ ಕಾರ್ಡ್ ಇರುವ ಪ್ರತಿ ಕುಟುಂಬಗಳಿಗೆ ಅಗ್ಗದ ಬೆಲೆಯಲ್ಲಿ ಪಡಿತರ ಸಾಮಗ್ರಿ

ಇನ್ಮುಂದೆ ಗೃಹಲಕ್ಷ್ಮಿ ಸ್ಟೇಟಸ್ ಚೆಕ್‌ ಮಾಡಲು ಹೊಸ ಲಿಂಕ್‌! ಖಾತೆಗೆ ಹಣ ಬಂತಾ ಚೆಕ್‌ ಮಾಡಿ

ಏಪ್ರಿಲ್ ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೂ ಬಂತಾ ಚೆಕ್‌ ಮಾಡಿ


Share

Leave a Reply

Your email address will not be published. Required fields are marked *