ಹಲೋ ಸ್ನೇಹಿತರೇ, ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರ ಸ್ವಂತ ಸೂರಿನ ಕನಸು ನನಸು ಮಾಡಲೆಂದೇ ಸರ್ಕಾರ ಜಾರಿಗೆ ತಂದ ಯೋಜನೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಾಗಿದೆ. ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡ ಜನರಿಗೆ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ.
Contents
ಪ್ರಧಾನ ಮಂತ್ರಿ ಆವಾಸ್ ಯೋಜನೆ:
ದೇಶದ ಎಲ್ಲರಿಗೂ ಸೂರು ಒದಗಿಸಬೇಕು ಎನ್ನುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2015-16 ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಮೂಲಕ ನಗರ ಮತ್ತು ಗ್ರಾಮೀಣದ ಪ್ರದೇಶದ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಮನೆ ನಿರ್ಮಿಸಿ ಕೊಡಲಾಗುತ್ತದೆ. ಈ ಯೋಜನೆಯಡಿ ವಾರ್ಷಿಕ ಶೇ. 6.50 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಹತ್ತು ವರ್ಷಗಳಲ್ಲಿ ಈ ಯೋಜನೆ ಮೂಲಕ ಸುಮಾರು 4.21 ಮನೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳನ್ನು ನಿರ್ಮಿಸಿ ಕೊಡುವ ತೀರ್ಮಾನವನ್ನು ಈಗಾಗಲೇ ಪ್ರಕಟಿಸಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ
- ಅರ್ಜಿದಾರರ ಫೋಟೊ
- ಫಲಾನುಭವಿಯ ಜಾಬ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಸಂಖ್ಯೆ
- ಬ್ಯಾಂಕ್ ಪಾಸ್‌ಬುಕ್
- ಸ್ವಚ್ಛ ಭಾರತ್ ಮಿಷನ್ ನೋಂದಣಿ ಸಂಖ್ಯೆ
- ಮೊಬೈಲ್ ನಂಬರ್
ಇದನ್ನೂ ಸಹ ಓದಿ : HDFC ಬ್ಯಾಂಕ್ ನಿಂದ ವಿದ್ಯಾರ್ಥಿಗಳಿಗೆ 75,000 ರೂ. ಸ್ಕಾಲರ್‌ಶಿಪ್! ಈಗಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?
- ಫಲಾನುಭವಿ ಭಾರತದ ನಿವಾಸಿಯಾಗಿರಬೇಕು.
- ಫಲಾನುಭವಿ ಶಾಶ್ವತ ಮನೆ ಹೊಂದಿರಬಾರದು.
- ಫಲಾನುಭವಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
- ಫಲಾನುಭವಿಯ ಹೆಸರು ಪಡಿತರ ಚೀಟಿ ಅಥವಾ ಪಿಬಿಎಲ್ ಪಟ್ಟಿಯಲ್ಲಿರಬೇಕು.
- ಫಲಾನುಭವಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರಬೇಕು. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು (ಅಧಾರ್ ಕಾರ್ಡ್) ಹೊಂದಿರಬೇಕು.
- ಫಲಾನುಭವಿಯ ಕುಟುಂಬದವರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
ಯೋಜನೆ ವೈಶಿಷ್ಟ್ಯಗಳು:
- ಈ ಯೋಜನೆ ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯವಾಗುತ್ತದೆ
- ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ಲಭ್ಯ.
- ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೀಸಲು.
- ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್‌ಸೈಟ್ https://pmaymis.gov.in/ಗೆ ಭೇಟಿ ನೀಡಿ
- ಅಥವಾ ಇಲ್ಲಿ ಕ್ಲಿಕ್ ಮಾಡಿ.
- ಹೋಮ್ ಪೇಜ್‌ನಲ್ಲಿ ಕಂಡು ಬರುವ PM ಆವಾಸ್ ಯೋಜನೆ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್ ಕ್ಲಿಕ್ ಮಾಡಿ.
ಆಫ್‌ಲೈನ್ ಮೂಲಕವೂ ನೀವು ಅರ್ಜಿ ಸಲ್ಲಿಬಹುದು. ಇದಕ್ಕಾಗಿ ನೀವು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ.
ಇತರೆ ವಿಷಯಗಳು:
ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಸೆ.15 ಕೊನೆಯ ದಿನ! ಇಲ್ಲದಿದ್ದರೆ ದಂಡ ಫಿಕ್ಸ್
ಬಿಯರ್ ಪ್ರಿಯರಿಗೆ ದರ ಹೆಚ್ಚಳದ ಬಿಸಿ! ಪ್ರೀಮಿಯಂ ಮದ್ಯದ ದರ ಇಳಿಕೆ
ಮಹಿಳೆಯರಿಗೆ ಸಿಹಿ ಸುದ್ದಿ! 50 ಸಾವಿರ ರೂ. ಸಾಲದ ಜೊತೆ 25 ಸಾವಿರ ಸಬ್ಸಿಡಿ