rtgh

ಉಚಿತ ಮನೆ ಯೋಜನೆಯಡಿ ₹1 ಲಕ್ಷ ಸಹಾಯಧನ! ಈ ಸುಲಭ ವಿಧಾನದಲ್ಲಿ ಅರ್ಜಿ ಸಲ್ಲಿಸಿ

PMAY yojana
Share

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸರ್ಕಾರಿ ಗೃಹ ಸಾಲ ಯೋಜನೆಯನ್ನು ಜಾರಿಗೆ ತಂದಿದ್ದು. ಈ ಯೋಜನೆಯನ್ನು ಜೂನ್ 2015 ರಿಂದ ಅನುಸ್ಥಾನ ಮಾಡಲಾಗಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶದ ಎಲ್ಲಾ ಬಡ ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಮನೆ ಒದಗಿಸುವ ಉದ್ದೇಶವನ್ನು ಹೊಂದಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯಿರಿ.

PMAY yojana

ಇತ್ತೀಚೆಗೆ ಈ ಯೋಜನೆಯ ಮಾನದಂಡದಲ್ಲಿ ಒಂದಿಷ್ಟು ಬದಲಾವಣೆಯನ್ನು ಮಾಡಲಾಗಿದ್ದು, ಪ್ರಸ್ತುತ ಈ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ? ಅರ್ಜಿ ಸಲ್ಲಿಸುವ ವಿಧಾನ ಹೇಗಿದೆ? ಅಗತ್ಯ ದಾಖಲೆಗಳೇನು?

ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸರ್ಕಾರದಿಂದ ಸಬ್ಸಿಡಿ ಮೊತ್ತವನ್ನು ನೇರವಾಗಿ  ಅರ್ಜಿ ಸಲ್ಲಿಸಿರುವ ಫಲಾನುಭವಿಯ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯು ನಗರ & ಗ್ರಾಮೀಣ ಎಂಬ 2 ವಿಭಾಗವನ್ನು ಹೊಂದಿದ್ದು. ಈ ಯೋಜನೆಯಡಿಯಲ್ಲಿ ಕೊಳೆಗೇರಿಗಳಲ್ಲಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಪ್ರತಿ ಮನೆಗೆ ರೂ.1 ಲಕ್ಷ ಸಹಾಯಧನ ನೀಡುತ್ತದೆ.

ಇದಲ್ಲದೇ ಗೃಹ ಸಾಲವನ್ನೂ(Home loan) ಸಹ ಪಡೆದುಕೊಳ್ಳಬಹುದಾಗಿದೆ. ಇದರ ಮೇಲೆ 6.5% ವರೆಗೆ ಬಡ್ಡಿ ಸಹಾಯಧನವನ್ನು ಒದಗಿಸಲಾಗುವುದು. ಸಾಲವನ್ನು 20 ವರ್ಷದಲ್ಲಿ ಮರುಪಾವತಿ ಮಾಡಿಕೊಳ್ಳಬಹುದಾಗಿದೆ.

ಈ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ:

ನೀವೇನಾದರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿಯ ಈ ಲಿಂಕ್‌ ಕ್ಲಿಕ್‌ ಮಾಡಿ  PMAY Status check  ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು. ತರೆ ವಿವರ ತೋರಿಸಿದರೆ ಈ ಯೋಜನೆಯಡಿ ನೀವು ಸೌಲಭ್ಯ ಪಡೆಯಲು ಅರ್ಹರು ಎಂದು.

PMAY(U) ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು?

PMAY ಯೋಜನೆಯಡಿ ಪ್ರಯೋಜನ ಪಡೆಯಲು ಆಸಕ್ತಿಯಿರುವ ಅರ್ಹ ನಾಗರಿಕರು ಗೂಗಲ್ ಪ್ಲೈ ಸ್ಟೋರ್ ನಲ್ಲಿ PMAY(U) ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಈ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

PMAY(U) ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಲಿಂಕ್: Download Now

ಮೊಬೈಲ್ ನಲ್ಲಿ ಆಗದಿದ್ದರೆ ನಿಮ್ಮ ಹತ್ತಿರದ ಗ್ರಾಮ/ಪಟ್ಟಣ ಪಂಚಾಯತಿ ಸೇವಾ ಕೇಂದ್ರಗಳಿಗೆ ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಲು ಫಲಾನುಭವಿಗಳು ಈಗಾಗಲೇ ಸ್ವಂತ ಮನೆಯನ್ನು ಹೊಂದಿರಬಾರದು. ಈ ಯೋಜನೆಯಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಅರ್ಜಿದಾರರು ಭಾರತೀಯರಾಗಿರಬೇಕು. ಅಲ್ಲದೆ ಭಾರತ ಸರ್ಕಾರ /ರಾಜ್ಯ ಸರ್ಕಾರದ ಯಾವುದೇ ವಸತಿ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿರಬಾರದು.

ಇಡಬ್ಲ್ಯೂಎಸ್ ಅಡಿಯಲ್ಲಿ ಫಲಾನುಭವಿಯ ವಾರ್ಷಿಕ ಆದಾಯ ರೂ.6 ಲಕ್ಷ ಮೀರಿರಬಾರದು. ಅದೇ LIG ಅಡಿಯಲ್ಲಿ ಫಲಾನುಭವಿ ವಾರ್ಷಿಕ ಆದಾಯ ರೂ.6 ಲಕ್ಷಕ್ಕಿಂತ ಹೆಚ್ಚು & ರೂ.12 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ. MIG-I ಫಲಾನುಭವಿಯ ವಾರ್ಷಿಕ ಆದಾಯವು ರೂ.12 ಲಕ್ಷ / ರೂ.18 ಲಕ್ಷಕ್ಕಿಂತ ಕಡಿಮೆ ಇರಬೇಕು. MIG-II ಗೆ ಫಲಾನುಭವಿಯ ವಾರ್ಷಿಕ ಆದಾಯ ರೂ. 18 ಲಕ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ಅರ್ಜಿದಾರರ ಆಧಾರ್ ಕಾರ್ಡ್. (Aadhar card)
  • ವಿಳಾಸ ದೃಡೀಕರಣ.
  • ಆದಾಯ ಪ್ರಮಾಣಪತ್ರ.
  • ವಯಸ್ಸಿನ ಪ್ರಮಾಣಪತ್ರ.
  • ಅರ್ಜಿದಾರರ ಮೊಬೈಲ್ ಸಂಖ್ಯೆ. (mobile number)
  • ಬ್ಯಾಂಕ್ ಪಾಸ್ ಪುಸ್ತಕ ಪ್ರತಿ.(bank pass book)
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ.(Photo)

ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಧಿಕೃತ ವೆಬ್ಸೈಟ್: Click here

ಇತರೆ ವಿಷಯಗಳು

7 ನೇ ಕಂತಿನ 2,000 ರೂ. ಹಣ ಜಮಾ ಯಾವಾಗ? ಇಲ್ಲಿದೆ DBT ಸ್ಟೇಟಸ್ ಚೆಕ್‌ ಮಾಡುವ ಲಿಂಕ್‌

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ.! ಮಾರ್ಚ್‌ 15 ಕೊನೆ ದಿನಾಂಕ ಬೇಗ ಅರ್ಜಿ ಹಾಕಿ


Share

Leave a Reply

Your email address will not be published. Required fields are marked *