rtgh
Headlines

ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Pre-monsoon showers
Share

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಪೂರ್ವ ಮುಂಗಾರುಮಳೆ ಆರಂಭ, ಶುಕ್ರವಾರ ದಕ್ಷಿಣ ಒಳನಾಡಿನ ಕೆಲವೆಡೆ & ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಸುರಿದಿದೆ. ಮತ್ತೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಲ್ಲೆಲ್ಲಿ ಮಳೆಯಾಗಲಿದೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ.

Pre-monsoon showers

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಹಲವು ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 7 cm, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 5 cm., ಕೊಡಗು ಜಿಲ್ಲೆ ಕುಶಾಲನಗರ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 4 cm ಮಳೆಯಾಗಿದೆ.

ಮೈಸೂರು ಜಿಲ್ಲೆ ಸರಗೂರು, ಕೊಡಗು ಜಿಲ್ಲೆ ನಾಪೋಕ್ಲು, ಮಂಡ್ಯ ಜಿಲ್ಲೆ ಮದ್ದೂರು, ಹಾಸನ ಜಿಲ್ಲೆ ಸಕಲೇಶಪುರದಲ್ಲಿ ತಲಾ 3 cm. ಮಳೆಯಾಗಿದೆ. ವಾಡಿಕೆ ಪ್ರಕಾರ, ರಾಜ್ಯದಲ್ಲಿ 10ರ ವರೆಗೂ 65 mm. ಮಳೆಯಾಗಬೇಕಿತ್ತು. ಸದ್ಯ 43 mm. ಮಳೆಯಾಗಿದೆ.

ಉತ್ತರ ಕನ್ನಡ, ಉಡುಪಿ & ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಗದಗ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಹಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಕಾಸರಗೋಡು: ಕೇರಳದ ಎಲ್ಲ ಜಿಲ್ಲೆಗಳಲ್ಲಿಯೂ ಮಂಗಳವಾರದವರೆಗೂ ಮಳೆಯಾಗುವ ಸಾಧ್ಯತೆ ಇದೆ, ನಾನಾ ಜಿಲ್ಲೆಗಳಿಗೆ ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಶನಿವಾರ ಪತ್ತನಂತಿಟ್ಟ & ಇಡುಕ್ಕಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಭಾನುವಾರ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಳಂ & ಇಡುಕ್ಕಿ ಜಿಲ್ಲೆಗಳಲ್ಲಿ & ಸೋಮವಾರ ಪತ್ತನಂತಿಟ್ಟ & ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು. ಈ ಸ್ಥಳಗಳಲ್ಲಿ 24 ಗಂಟೆಗಳಲ್ಲಿ 64.5 mm .ನಿಂದ 115.5 ಮಿ.ಮೀ. ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ತಿಳಿಸಲಾಗಿದೆ.

ಇತರೆ ವಿಷಯಗಳು

ರೈಲ್ವೆ ಪ್ರಯಾಣ ಸಮಯದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪು ಮಾಡ್ಬೇಡಿ.! ಬೀಳುತ್ತೆ ಭಾರೀ ದಂಡ

10 ರಿಂದ 40 ಲಕ್ಷ ಪಡೆಯಲು ಕೂಡಲೇ ಅಪ್ಲೇ ಮಾಡಿ! ಸರ್ಕಾರದ ಹೊಸ ಯೋಜನೆ


Share

Leave a Reply

Your email address will not be published. Required fields are marked *