rtgh
Headlines

ನಾಳೆ ಈ ಸಮಯಕ್ಕೆ ಬಿಡುಗಡೆಯಾಗಲಿದೆ PUC ರಿಸಲ್ಟ್! ಇಲ್ಲಿದೆ ನೇರ ಲಿಂಕ್

PUC result karnataka
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) 2023-24ನೇ ಸಾಲಿನ ಕರ್ನಾಟಕ 1st PUC ಫಲಿತಾಂಶವನ್ನ ಪ್ರಕಟಿಸಲಿದೆ. ನೀವು ಫಲಿತಾಂಶವನ್ನು ಹೇಗೆ ಸುಲಭವಾಗಿ ನೋಡಬಹುದು ಎಂಬುವುದನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

PUC result karnataka

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ 27 ರವರೆಗೆ ನಡೆಸಿದ್ದು, ಕರ್ನಾಟಕದಲ್ಲಿ ಪ್ರಥಮ ಪಿಯುಸಿಯ ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಏಕಕಾಲದಲ್ಲಿ ಪರೀಕ್ಷೆಗಳನ್ನು ಎದುರಿಸಿದರು. ಈ ಪರೀಕ್ಷೆಗಳ ಮೌಲ್ಯಮಾಪನವೂ ಮುಗಿದಿದ್ದು, ಈ ಬಾರಿಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಲು ಮಂಡಳಿ ಮುಂದಾಗಿದೆ.

ಇದನ್ನೂ ಸಹ ಓದಿ: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ.! SSLC ಪಾಸಾಗಿ ಅರ್ಜಿ ಹಾಕಿದ್ರೆ ಸಿಗುತ್ತೆ ತಿಂಗಳಿಗೆ 81,100 ರೂ. ವೇತನ

ಫಲಿತಾಂಶಗಳು ಮಂಡಳಿಯ ವೆಬ್‌ಸೈಟ್ karresults.nic.in ನಲ್ಲಿ ಲಭ್ಯವಿರುತ್ತವೆ ಮತ್ತು ಮಾರ್ಚ್ 30 ರಂದು ಫಲಿತಾಂಶಗಳನ್ನು ಮಂಡಳಿಯ ವೆಬ್‌ಸೈಟ್ karresults.nic.in ನಲ್ಲಿ ಬೆಳಿಗ್ಗೆ 9 ರಿಂದ 11 ರ ನಡುವೆ ಪ್ರಕಟಿಸಲಾಗುತ್ತದೆ. ಮೊಬೈಲ್ ಅಥವಾ ಇಂಟರ್ನೆಟ್ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಅದೇ ದಿನ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಕಾಲೇಜುಗಳಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು.

ಪ್ರತಿ ವರ್ಷ ಪ್ರಥಮ ಪಿಯುಸಿಯ ವಾರ್ಷಿಕ/ ಪೂರಕ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಜಿಲ್ಲಾ ಮಟ್ಟದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಮೂಲಕ ಆಯೋಜಿಸುತ್ತಿದೆ. ಇದಕ್ಕಾಗಿ ಈ ಹಿಂದೆಯೇ ಪ್ರತ್ಯೇಕ ವೇಳಾಪಟ್ಟಿ ಪ್ರಕಟಿಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲಾಗುತ್ತಿದೆ.

ಈ ಬಾರಿಯೂ ಬಹುತೇಕ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆದಿವೆ. ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 12.30ರವರೆಗೆ ನಡೆದವು. ಇದಲ್ಲದೆ, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ. ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಪರೀಕ್ಷೆಯ ಶುಲ್ಕ ಪಾವತಿಸಲು ಏಪ್ರಿಲ್ 20ರವರೆಗೆ ಅವಕಾಶ ನೀಡಲಾಗಿದೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪೂರಕ ಪರೀಕ್ಷೆಯ ವಿವರಗಳನ್ನು ಆಯಾ ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕಾಲೇಜು ಪ್ರಾಂಶುಪಾಲರಿಗೆ ಪ್ರಕಟಿಸಲು ಈಗಾಗಲೇ ಸೂಚಿಸಲಾಗಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಿ ಪರೀಕ್ಷೆ ಎದುರಿಸಲು ಅಗತ್ಯ ನೆರವು ನೀಡುವಂತೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಇತರೆ ವಿಷಯಗಳು

ಇಂದಿನಿಂದಲೇ ನೀತಿ ಸಂಹಿತೆ ಜಾರಿ: ಯಾವೆಲ್ಲ ನಿಯಮಗಳು ಇರಲಿವೆ?

ಎಪ್ರಿಲ್‌ನಿಂದ ದುಬಾರಿಯಾಗಲಿದೆ ಔಷಧಿಗಳ ಬೆಲೆ.! ಯಾವ ಮಾತ್ರೆಯ ಬೆಲೆ ಎಷ್ಟು ಗೊತ್ತಾ??


Share

Leave a Reply

Your email address will not be published. Required fields are marked *