rtgh
Headlines

ಪೋಲಿಯೋ ಲಸಿಕೆ ಅಭಿಯಾನದ ದಿನಾಂಕ ನಿಗದಿ.! ಫೋಷಕರೇ ತಪ್ಪದೆ ನಿಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ

pulse polio programme
Share

ಹಲೋ ಸ್ನೇಹಿತರೇ, ಇದೇ ಮಾರ್ಚ್ 3 ರಂದು ರಾಜ್ಯಾದ್ಯಂತ 0-5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್‌ ಕುಮಾ‌ರ್ ಅವರು ತಿಳಿಸಿದ್ದಾರೆ.

pulse polio programme

ರಾಜ್ಯಾದ್ಯಂತ ಮಕ್ಕಳಿಗೆ pulse polio programme ಕಾರ್ಯಕ್ರಮವನ್ನು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜನೆ ಮಾಡಲಾಗಿದೆ ಈ ಕುರಿತು ಇಲಾಖೆಯಿಂದ ಹೊರಡಿಸಿರುವ ಪತ್ರಿಕಾ ಪ್ರಕಟಣೆ ವಿವರಗಳನ್ನು ತಿಳಿಯಿರಿ.

ವಿಕಾಸಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ದಡಾರ ರುಬೆಲ್ಲಾ ನಿರ್ಮೂಲನೆ ಮತ್ತು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತಾದ ರಾಜ್ಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದಡಾರ ಮಕ್ಕಳ ಮಾರಾಣಾಂತಿಕ ಕಾಯಿಲೆಯಾಗಿದ್ದು, ದಡಾರ ವಿರುದ್ಧವಾಗಿ ಲಸಿಕೆ ಪಡೆದರೆ ಇದರಿಂದ ಸಂಭವಿಸುವ ಸಾವನ್ನು 94% ರಷ್ಟು ತಡೆಯಬಹುದಾಗಿದೆ. ರಾಜ್ಯದಲ್ಲಿ 2023 ನೇ ಸಾಲಿನಲ್ಲಿ 4074 ದಡಾರ ಪ್ರಕರಣಗಳು ದಾಖಲಾಗಿದೆ ಎಂದರು.

ರುಬೆಲ್ಲಾ ಕೂಡ ಒಂದು ಬಗೆಯ ವೈರಾಣು ಸೋಕಿತ ಕಾಯಿಲೆಯಾಗಿದ್ದು, ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಈ ಸೋಂಕು ಸಂಭವಿಸುತ್ತದೆ. ಇದರಿಂದ ಹುಟ್ಟುವ ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ನ್ಯೂನತೆ ಸಂಭವಿಸುತ್ತದೆ ರಾಜ್ಯದಲ್ಲಿ 2023 ನೇ ಸಾಲಿನಲ್ಲಿ 231 ರುಬೆಲ್ಲಾ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದರು.

ಮಾರ್ಚ್ 3 ರಂದು ರಾಜ್ಯಾದ್ಯಂತ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ:

ಲಸಿಕ ಹಾಕಿಸಲು ನಿಗಧಿತ ಬೂತ್, ಅಂಗನವಾಡಿ ಮುಂತಾದ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ, ನಗರ ಮಟ್ಟದಲ್ಲು ಪೋಲಿಯೋ ಲಸಿಕೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಾರ್ಚ್ 3 ರಂದು ಬೂತ್‌ಗಳಲ್ಲಿ ಮತ್ತು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ನಂತರದ 3 ದಿನಗಳು ತಂಡಗಳು ಮನೆ ಮನೆಗೆ ತೆರಳಿ ಲಸಿಕೆ ನೀಡತ್ತದೆ. 2008 ರಿಂದ ರಾಜ್ಯದಲ್ಲಿ ಯಾವುದೇ ಪೋಲಿಯೋ ಪ್ರಕರಣ ಸಂಭವಿಸಿಲ್ಲ ಎಂದು ತಿಳಿಸಲಾಗಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ:

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ವೆಬ್ಸೈಟ್: Click here

ಇತರೆ ವಿಷಯಗಳು

ಅನ್ನದಾತರಿಗೆ ಸಿಹಿ ಸುದ್ದಿ: ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ₹10,000 ರೈತರ ಖಾತೆಗೆ!

ಇಂಡಿಯಾ ಯಂಗ್ ಪ್ರೊಫೆಷನಲ್ ಸ್ಕೀಮ್‌! ಇಂದಿನಿಂದಲೇ ಅರ್ಜಿ ಪ್ರಕ್ರಿಯೆ ಆರಂಭ


Share

Leave a Reply

Your email address will not be published. Required fields are marked *