rtgh

ರಾಜ್ಯದಲ್ಲಿ ಇನ್ನೆರಡು ದಿನ ಮುಂದುವರೆದ ಮಳೆರಾಯ! IMD ಎಚ್ಚರಿಕೆ

rain alert karnataka
Share

ಹಲೋ ಸ್ನೇಹಿತರೇ, ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು, ಬಿರುಗಾಳಿ ಸಹಿತ (30-40 kmph ವೇಗ) ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

rain alert karnataka

ಉತ್ತರ ಒಳ ಕರ್ನಾಟಕದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮಾಹಿತಿ ನೀಡಿದೆ.

ಇದನ್ನೂ ಸಹ ಓದಿ : ಕೇಬಲ್, DTH ಚಂದಾದಾರರಿಗೆ ಗುಡ್ ನ್ಯೂಸ್! ಅಗ್ಗವಾಗಲಿದೆ ನಿಮ್ಮ ಮಾಸಿಕ ಬಿಲ್

ಇನ್ನು ಜುಲೈ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಪ್ರತ್ಯೇಕ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಜುಲೈ 16ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ದಕ್ಷಿಣ ಕನ್ನಡ: ಕರ್ನಾಟಕ ಕರಾವಳಿಗೆ ಮುಲ್ಕಿಯಿಂದ ಮಂಗಳೂರಿನವರೆಗೆ ಹೈ ವೇವ್ ವಾಚ್: ಜುಲೈ 11ರಂದು ರಾತ್ರಿ 11:30 ಗಂಟೆಗಳವರೆಗೆ 2.1 – 2.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಗೆ ಹೈ ವೇವ್ ವಾಚ್: ರಾತ್ರಿ 11:30 ಗಂಟೆಗಳವರೆಗೆ 2.2-2.4 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಉತ್ತರ ಕನ್ನಡ: ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ವಾಚ್: ರಾತ್ರಿ 11:30 ಗಂಟೆಗಳವರೆಗೆ 2.4 2.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇತರೆ ವಿಷಯಗಳು:

ಇನ್ನು 2 ದಿನ ರಾಜ್ಯದಲ್ಲಿ ಭಾರೀ ಮಳೆ! ಹವಾಮಾನ ಇಲಾಖೆ ಸೂಚನೆ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಾರಂಭ..! ಈ ದಿನಾಂಕಕ್ಕೂ ಮುನ್ನ ಅಪ್ಲೇ ಮಾಡಿ

BPL ಕುಟುಂಬದ 2 ಹೆಣ್ಣು ಮಕ್ಕಳಿಗೆ ತಲಾ 1 ಲಕ್ಷ ಮಂಜೂರು


Share

Leave a Reply

Your email address will not be published. Required fields are marked *