ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಇಂದು ನಾವು ನಿಮಗೆ ಈ ಲೇಖನದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.
ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರವೇ ಹೀಟ್ ವೇವ್ ಜಾಸ್ತಿಯಾಗಲಿದ್ದು, ಮಳೆಯಾಗುವಂತಹ ಯಾವುದೆ ಮುನ್ಸೂಚನೆಯಿಲ್ಲ.
ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಸೇರಿದಂತೆ ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗೂ ಉಡುಪಿ, ಚಿಕ್ಕಮಗಳೂರು, ಬೀದರ್, ಮೈಸೂರು, ಬಾಗಲಕೋಟೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹ ಮಳೆಯಾಗಬಹುದು. ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಗದಗ, ವಿಜಯನಗರ ಹಾಗೂ ವಿಜಯಪುರದಲ್ಲಿ ಮೋಡ ಕವಿದಂತಹ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.
ಇತರೆ ವಿಷಯಗಳು:
2023-24ನೇ ಸಾಲಿನ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.!
ಬಸ್ ಪ್ರಯಾಣ ಮಾಡುವವರಿಗೆ ಕಟ್ಟೆಚ್ಚರ.!! ಈ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ದಂಡ