ಬೆಂಗಳೂರು : ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ.
ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಇಂದು ಆರೆಂಜ್ ಅಲರ್ಟ್ ಅನ್ನು ಘೋಷಿಸಿದ್ದು, . ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ನೀಡಿ ಎಚ್ಚರಿಕೆಯನ್ನು ವಹಿಸಲು ಸೂಚನೆಯನ್ನು ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ಗುಡುಗು ಸಹಿತವಾಗಿ ಮಳೆಯಾಗುವ ಸಾಧ್ಯತೆಯು ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಮೈಸೂರು, ತುಮಕೂರು, ರಾಮನಗರ, ವಿಜಯನಗರ ಜಿಲ್ಲೆಯ ಹಲವು ಕಡೆ ಗುಡುಗು ಸಹಿತವಾಗಿ ಮಳೆಯಾಗುವ ಸಾಧ್ಯತೆಯು ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಉತ್ತರಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.
ಇತರೆ ವಿಷಯಗಳು:
ಬಸ್ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ: ಟಿಕೆಟ್ ದರ ದಿಢೀರನೆ 15% ಹೆಚ್ಚಳ!
ರಾಜ್ಯದ್ಯಂತ 18 ಲಕ್ಷ ರೈತರ ನೋಂದಣಿ! ಕುಸುಮ್ ಯೋಜನೆಯಡಿ ಉಚಿತ ಸೌರ ಪಂಪ್‌ಸೆಟ್