ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮಿಯವಾದ ಸ್ವಾಗತ, ರಾಜ್ಯಾದ್ಯಂತ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ, ಕಳೆದ ವಾರ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ ಹೊಗಿದ್ದ ಮಳೆರಾಯ ನಿನ್ನೆ ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ದರ್ಶನ ನೀಡಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಅಲ್ಪ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಸಹ ಓದಿ: ಬ್ರೇಕಿಂಗ್ ನ್ಯೂಸ್.! ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಮಾರ್ಚ್ 25 ಕೊನೆ ದಿನ; ಇಲ್ಲಿದೆ ಕಂಪ್ಲೀಟ್ ಅಪ್ಡೇಟ್
Contents
ಬೆಂಗಳೂರಿನಲ್ಲಿ ಮಳೆ ಪ್ರಾರಂಭ ಯಾವಾಗ?
ಹವಾಮಾನ ಇಲಾಖೆ ಹೇಳಿಕೆಯ ಪ್ರಕಾರ ಯುಗಾದಿ ವೇಳೆಗೆ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಏಪ್ರಿಲ್ ಎರಡನೇ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
2024 ರಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ
ಕರ್ನಾಟಕದಲ್ಲಿ ಕಳೆದ ವರ್ಷ(2023) ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣದಿಂದಾಗಿ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಾರ್ಚ್ ತಿಂಗಳಿನಲ್ಲಿ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ಒಟ್ಟಾರೆಯಾಗಿ 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, 2023ರಲ್ಲಿ ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ 19% ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ 35% ಮಳೆ ಕೊರತೆ ಉಂಟಾಗಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಕೇವಲ 1020.2 ಮಿ.ಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ತಿಂಗಳ ನಡುವೆ 474.6 ಮಿ.ಮೀ ಮಳೆ ದಾಖಲಾಗಿದ್ರೆ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ 202.9 ಮಿಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತರೆ ವಿಷಯಗಳು
ಬೋರ್ಡ್ ಪರೀಕ್ಷೆ ನೂತನ ವೇಳಾಪಟ್ಟಿ ಪ್ರಕಟ.! ವಿದ್ಯಾರ್ಥಿಗಳಿಗೆ ಸಜ್ಜಾಗುವಂತೆ ಶಿಕ್ಷಣ ಇಲಾಖೆ ಸೂಚನೆ
ಇಂದಿನಿಂದ 3 ದಿನ ಗುಡುಗು ಸಹಿತ ಭಾರಿ ಮಳೆ!! ಈ ಜಿಲ್ಲೆಗಳಿ ಹವಾಮಾನ ಇಲಾಖೆ ಮುನ್ಸೂಚನೆ