ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗುತ್ತದೆ. ರೇಷನ್ ಕಾರ್ಡ್ ಗೆ ಸಂಬಂಧ ಪಟ್ಟ ಕೆಲವು ಕೆಲಸಗಳನ್ನು ಮಾಡದಿದ್ರೆ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಜೋಡಣೆಯ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆಯನ್ನು ಮಾಡಿದೆ.
ಇಲ್ಲಿಯವರಗೆ ಜೂ.30 ಕೊನೆಯ ದಿನಾಂಕವಾಗಿತ್ತು, ಆದರೆ ಇನ್ನೂ ಕೆಲವರು ಪಡಿತರ ಚೀಟಿಯ ಜೊತೆಗೆ ಆಧಾರ್ ಕಾರ್ಡ್ ಜೋಡಣೆಯನ್ನು ಮಾಡದ ಹಿನ್ನೆಲೆ ಈ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆಯನ್ನು ಮಾಡಿದೆ. ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಬೇಕು.
ಇದನ್ನೂ ಸಹ ಓದಿ: ರಾಜ್ಯದ ಶಾಲಾ ಮಕ್ಕಳಿಗೆ ಇನ್ಮುಂದೆ ವಾರದಲ್ಲಿ 6 ದಿನವೂ ಸಿಗಲಿದೆ ಮೊಟ್ಟೆ..!
ಪಡಿತರ ಪಡೆಯದ್ರೆ ಇದ್ರೆ ಬಿಪಿಎಲ್ ಕಾರ್ಡ್ ರದ್ದು
ಆಹಾರ ಇಲಾಖೆಯು 6 ತಿಂಗಳಿನಿಂದ ಪಡಿತರ ಪಡೆಯದ BPL ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ. 6 ತಿಂಗಳಿನಿಂದ ರೇಷನ್ ಅನ್ನು ಪಡೆಯದವರ ರೇಷನ್ ಕಾರ್ಡ್ ಅನ್ನು ರದ್ದು ಮಾಡುತ್ತಿದ್ದು, ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ಅನ್ನು ರದ್ದುಪಡಿಸಲಾಗುತ್ತದೆ ಎನ್ನಲಾಗಿದೆ.
ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯ
ಸರ್ಕಾರವು ಈಗಾಗಲೇ ಜಾರಿಗೆ ತಂದಿರುವ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಸರ್ಕಾರ ರೇಷನ್ ಕಾರ್ಡ್ ಗೆ Ekyc ಮಾಡಿಸುವುದುದನ್ನು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎನ್ನುವುದನ್ನು ತಿಳಿಯಲು ಸರ್ಕಾರವು ಇಕೆವೈಸಿ ಯನ್ನು ಕಡ್ಡಾಯಗೊಳಿಸಿದೆ.
ಇತರೆ ವಿಷಯಗಳು:
ಸರ್ಕಾರದಿಂದ ಉಚಿತ ‘NEET’ ತರಬೇತಿ! ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಬಂಪರ್ ಆಫರ್
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದಿಢೀರ್ ಬದಲಾವಣೆ!