ಹಲೋ ಸ್ನೇಹಿತರೇ, 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರದ ಮೊತ್ತವನ್ನು ವಿಮಾ ಕಂಪನಿಯಿಂದ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ತೀವ್ರ ಬರಗಾರಲದಿಂದ ತತ್ತರಿಸಿ ಹೋಗಿರುವ ರೈತರಿಗೆ ಅಲ್ಲದೇ ಬಂಡವಾಳ ಹಾಕಿ ಬೆಳೆದಿರುವ ಬೆಳೆಯಿಂದ ಬಂಡವಾಳದ ಹಣವು ಸಹ ಬರದೇ ಇದ್ದಂತಹ ಸನ್ನಿವೇಶದಲ್ಲಿ ರಾಜ್ಯ ಕೆಲವೊಂದು ಜಿಲ್ಲೆಗಳಲ್ಲಿ ರೈತರಿಗೆ ಅರ್ಥಿಕವಾಗಿ ಸಹಾಯ ನೀಡಲು 2023-24 ನೇ ಸಾಲಿನ ಅಂದರೆ ಈ ವರ್ಷದ ಮುಂಗಾರಿ ಹಂಗಾಮಿನ ಬೆಳೆ ವಿಮೆ ಪರಿಹಾರದ ಹಣವನ್ನು ವಿಮಾ ಕಂಪನಿಗಳು ರೈತರ ಖಾತೆಗೆ ಬಿಡುಗಡೆಗೊಳಿಸಿವೆ.
ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಅರ್ಜಿ ವಿವರ ಮತ್ತು ಬೆಳೆ ವಿಮೆ ಪರಿಹಾರದ ಹಣ ಎಷ್ಟು ಜಮಾ ಅಗಿದೆ? ಹಾಗೂ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ಸಹ ಈ ಲೇಖನದಲ್ಲಿ ವಿವರಿಸಲಾಗಿದೆ.
Contents
ಯಾವೆಲ್ಲ ಬೆಳೆಗಳ ಬೆಳೆ ವಿಮೆ ಪಾವತಿ:
ಮೆಕ್ಕೆಜೋಳ, ಶೇಂಗಾ ಮತ್ತು ಆಯಾ ಪ್ರದೇಶದ ಪ್ರಮುಖ ಬೆಳೆಗಳಿಗೆ ಬೆಳೆ ವಿಮೆ ಪರಿಹಾರದ ಹಣ ಪಾವತಿಯನ್ನು ರೈತರ ಖಾತೆಗೆ ವರ್ಗಾವಣೆಯನ್ನು ವಿಮಾ ಕಂಪನಿಗಳು ಮಾಡುತ್ತಿವೆ.
ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ:
ಪ್ರಸ್ತುತ ಮಾಹಿತಿಯ ಪ್ರಕಾರ ಚಿತ್ರದುರ್ಗ ಮತ್ತು ದಾವಣೆಗೆರೆ ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ರೈತರ ಖಾತೆಗೆ ಬೆಳೆ ವಿಮಾ ಹಣ ಜಮಾ ಮಾಡಲಾಗುತ್ತಿದೆ. ಬೆಳೆ ನಷ್ಟದ ಪ್ರಮಾಣದ ಆಧಾರದ ಮೇಲೆ ಮಾರ್ಗಸೂಚಿ ಅನ್ವಯ ಇತರೆ ಜಿಲ್ಲೆಗಳಲ್ಲಿಯೂ ಬೆಳೆ ವಿಮೆ ಅರ್ಜಿ ವಿಲೇವಾರಿಯನ್ನು ಇಲಾಖೆ ಮತ್ತು ವಿಮಾ ಕಂಪನಿಗಳಿಂದ ಮಾಡಲಾಗುತ್ತಿದೆ.
ಇದನ್ನೂ ಸಹ ಓದಿ : ಈ ಯೋಜನೆಯಡಿ ನಿರುದ್ಯೋಗಿಗಳಿಗೆ ಸಿಗುತ್ತೆ ₹8,000! ಇಂದೇ ಅಪ್ಲೇ ಮಾಡಿ
ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಬಂತಾ ಚೆಕ್ ಮಾಡಿ:
ರೈತರು ಯಾವುದೇ ಕಚೇರಿ ಅಲೆದಾಡದೆ ತಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ಅಗಿದಿಯಾ? ಇಲ್ಲವಾ? ಎಂದು ಚೆಕ್ ಮಾಡಿಕೊಳ್ಳಬಹುದು. ಜೊತೆಗೆ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎಂದು ಸಹ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬಹುದು.
Step-1: ಪ್ರಥಮದಲ್ಲಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರಕಾರದ ಬೆಳೆ ವಿಮೆ ಅರ್ಜಿ ವಿಲೇವಾರಿಯ ಅಧಿಕೃತ ಸಂರಕ್ಷಣೆ ವೆಬ್ಸೈಟ್ ಪ್ರವೇಶ ಮಾಡಬೇಕು. ತದನಂತರ ವರ್ಷ “2023-24” ಎಂದು ಋತು ಆಯ್ಕೆ ಮುಂಗಾರು ಎಂದು ಕ್ಲಿಕ್ ಮಾಡಬೇಕು.
Step-2: ಮೇಲಿನ ಹಂತಗಳನ್ನು ಪೂರ್ಣಗೊಳಿಸಿದ ಬಳಿಕ ಈ ಪುಟದಲ್ಲಿ ಕೆಳಗಡೆ ರೈತರ ಕಾಲಂನಲ್ಲಿ ಕಾಣುವ “Crop Insurance Details On Survey no” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ಬಳಿಕ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಜಮೀನಿನ ಸರ್ವೆ ನಂಬರ್ ಹಾಕಿ “Search” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ವೆ ನಂಬರ್ ನಲ್ಲಿ ಲಭ್ಯವಿರುವ ಹಿಸ್ಸಾ ನಂಬರ್ ಗಳು ತೋರಿಸುತ್ತವೆ ಒಂದೊದರ ಮೇಲೆ ಕ್ಲಿಕ್ ಮಾಡಿದಾಗ ಆ ಸರ್ವೆ ನಂಬರ್ ನ ಬೆಳೆ ವಿಮೆ ಅರ್ಜಿ ನಂಬರ್ ತೋರಿಸುತ್ತದೆ ಅದನ್ನು ಒಂದು ಕಡೆ ಬರೆದುಕೊಳ್ಳಬೇಕು.
Step-4: ಮೇಲಿನ ವಿಧಾನ ಅನುಸರಿಸಿ ಅರ್ಜಿ ನಂಬರ್ ಅನ್ನು ತೆಗೆದುಕೊಂಡ ಬಳಿಕ ಇದೆ ಪೇಜ್ ನ ಮೇಲೆ ಬಲಬದಿಯಲ್ಲಿ ಕಾಣುವ “Home” ಬಟನ್ ಮೇಲೆ ಕ್ಲಿಕ್ ಮಾಡಿ “check status” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
Step-5: ಈ ಪುಟದಲ್ಲಿ ಅರ್ಜಿ ಸಂಖ್ಯೆ ಮತ್ತು ಕ್ಯಾಪ್ಚರ್ ಕೋಡ್ ಹಾಕಿ “Search” ಬಟನ್ ಮೇಲೆ ಕ್ಲಿಕ್ ಮಾಡಿದರೆ ಕೆಳಗೆ ಅರ್ಜಿಯ ವಿವರ ಮತ್ತು ಮಧ್ಯಂತರ ಬೆಳೆ ವಿಮೆ ಜಮಾ ವಿವರ ತೋರಿಸುತ್ತದೆ. ಎಷ್ಟು ಹಣ ಜಮಾ ಅಗಿದೆ? ಯಾವ ದಿನಾಂಕ? ಬ್ಯಾಂಕ್ ಖಾತೆ ವಿವರ ತೋರಿಸುತ್ತದೆ.
ಇತರೆ ವಿಷಯಗಳು:
ನೌಕರರ ಮೂಲ ವೇತನಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್!
ಮಹಿಳೆಯರು ಈಗ ಪ್ರತಿ ತಿಂಗಳು ಪಡೆಯುತ್ತಾರೆ ₹1000!
ಅಟಲ್ ಪಿಂಚಣಿ ಯೋಜನೆಯಲ್ಲಿ ಹೊಸ ಬದಲಾವಣೆ! ₹5,000 ಪಡೆಯಲು ಈ ರೀತಿ ಅರ್ಜಿ ಸಲ್ಲಿಸುವುದು ಕಡ್ಡಾಯ