rtgh
Headlines

ಈ ಸರ್ಕಾರಿ ನೌಕರರ ರೀಲ್ಸ್‌ ಗೆ ಬ್ರೇಕ್! ​ವಿಡಿಯೋ ಮಾಡಿದ್ರೆ ಕೆಲಸ ಕಳೆದುಕೊಳ್ಳೋದು ಗ್ಯಾರೆಂಟಿ

Restrictions on the reels of KSRTC employees
Share

ಹಲೋ ಸ್ನೇಹಿತರೆ, ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿನ ಬಸ್ ಚಾಲಕರು ಅಥವಾ ನಿರ್ವಾಹಕರು ಬಸ್‌ ಓಡಿಸುವಾಗ ಅನಗತ್ಯವಾಗಿ ಮೊಬೈಲ್ ಬಳಕೆ ಮಾಡಿ ರೀಲ್ಸ್ ಮಾಡಿದರೆ ಸೇವೆಯಿಂದ ಅಮಾನತುಗೊಳಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೌಕರರಿಗೆ ನೀಡಿದೆ.

Restrictions on the reels of KSRTC employees

ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಕಲ್ಯಾಣ ಸಾರಿಗೆಯಲ್ಲಿನ ಸಿಬ್ಬಂದಿ ಇತ್ತೀಚೆಗೆ ಹೆಚ್ಚು ರೀಲ್ಸ್ ಚಟಕ್ಕೆ ಬಿದ್ದಿದ್ದು, ಕರ್ತವ್ಯದ ವೇಳೆ ರೀಲ್ಸ್ ಮಾಡುತ್ತಿದ್ದಾರೆ. ಕಳೆದ ಮೇ ತಿಂಗಳಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ಬಸ್ ಓಡಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಮುಂದಿಟ್ಟುಕೊಂಡು ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಬಸ್​ಗಳು ಸೋರುತ್ತಿವೆ ನಿಮ್ಮದು ಅವ್ಯವಸ್ಥೆ ಎಂದು ಕೆಂಡಕಾರಿದ್ದರು.

ಇದನ್ನು ಓದಿ: ಶಾಲಾ ಮಕ್ಕಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಣೆ; ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಬಸ್‌, ಕೆಎಸ್​ಆರ್​ಟಿಸಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದವು. ಕೆಲ ಚಾಲಕರ ಹಾಗೂ ನಿರ್ವಾಹಕರ ಈ ಹುಚ್ಚಾಟಗಳಿಂದ ಪ್ರಯಾಣಿಕರು ಪರದಾಡುವಂತಾಗಿತ್ತು ತೊಂದರೆ ಅಟನುಭವಿಸುತ್ತಿದ್ದಾರೆ. ಈ ಸಂಬಂಧ ಹಲವಾರು ದೂರುಗಳು, ಆಕ್ಷೇಪಗಳು ಕೂಡ ಸಲ್ಲಿಕೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಇಲಾಖೆ, ಇನ್ನು ಮುಂದೆ ಕರ್ತವ್ಯದ ವೇಳೆ ಅನಪೇಕ್ಷಣೀಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಮಾಡುವುದು ಕಂಡುಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ಗೊಳಿಸಲಾಗುತ್ತದೆ. ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಸರ್ಹರಲ್ಲ. ಅಂತಹ ನೌಕರರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರದೆ ಕೆಲಸದಿಂದ ತೆಗೆದು ಹಾಕಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಇತರೆ ವಿಷಯಗಳು:

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪೋಷಕರ ಖಾತೆಗೆ 22 ಲಕ್ಷ..!

ಈ ಬ್ಯಾಂಕಿನಲ್ಲಿ ಖಾತೆಯಿದ್ದ ರೈತರಿಗೆ ಗುಡ್‌ನ್ಯೂಸ್.!‌ ಇಂದೇ ಬ್ಯಾಂಕ್‌ಗೆ ಭೇಟಿ ನೀಡಿ


Share

Leave a Reply

Your email address will not be published. Required fields are marked *