ಹಲೋ ಸ್ನೇಹಿತರೆ, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿನ್ನೆಯ ಸಭೆಯಲ್ಲಿ ಸರ್ಕಾರ ಯಾವುದೇ ಸಿಹಿ ಸುದ್ದಿಯನ್ನು ನೀಡದೇ ಇರುವುದಕ್ಕೆ ನಿರಾಸೆಯಾಗಿದೆ. ಹೌದು, 7ನೇ ವೇತನ ಆಯೋಗದ ವರದಿ ಕುರಿತಂತೆ ಸಭೆಯಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಈ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ” ಎಂದು ಚಿವ ಎಚ್.ಕೆ. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲಿಗೆ ಏಳನೇ ವೇತನ ಆಯೋಗದ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಿತ್ತು. ಮುಖ್ಯಮಂತ್ರಿಗಳು ಚುನಾವಣೆ ನಂತರದಲ್ಲಿ ವರದಿ ಜಾರಿ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳದಿರುವುದು ನೌಕರರಿಗೆ ತೀವ್ರ ನಿರಾಸೆ ಉಂಟುಮಾಡಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಸಂಗಾ ತಿಳಿಸಿದ್ದಾರೆ.
ವೇತನದಲ್ಲಿ 30% ಕೂಡಲೇ ವೇತನ ಹೆಚ್ಚು ಮಾಡಬೇಕು. ಉದಾಸಿನ ಧೋರಣೆ ತಾಳಿದಲ್ಲಿ ರಾಜ್ಯಮಟ್ಟದ ಸಂಘಟನೆಯೊಂದಿಗೆ ಸೇರಿ ಚರ್ಚಿಸಿ ಪ್ರತಿಭಟನೆಗೆ ರೂಪರೇಷೆ ಸಿದ್ಧಪಡಿಸಲಾಗುವುದು. ಮುಂದಿನ ಎರಡು ವಾರದೊಳಗೆ ರಾಜ್ಯ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇತರೆ ವಿಷಯಗಳು:
ಟೊಮೆಟೊ ಪ್ರಿಯರಿಗೆ ಶಾಕಿಂಗ್ ಸುದ್ದಿ: ದಿಢೀರನೆ ಕೆಜಿಗೆ ₹80 ಏರಿಕೆ!!
ಇಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’! ಏರಿಕೆಯಾಗಲಿದೆಯಾ ಮೂಲ ವೇತನ?