ಹಲೋ ಸ್ನೇಹಿತರೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಶಾಲಾ ಕಾಲೇಜು, ಉದ್ಯೋಗಗಳಿಗೆ ಹೋಗುತ್ತಿರುವವರಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಇಂದು ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭಾರೀ ಮಳೆ ಹಿನ್ನೆಲೆಯಲ್ಲಿ ಆಯಾ ತಾಲೂಕಿನ ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ತಾಲೂಕು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದರು. ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಶಾಲಾ ಕಾಲೇಜು, ಉದ್ಯೋಗಗಳಿಗೆ ಹೋಗುತ್ತಿರುವವರಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಸಹ ಓದಿ : ಮಳೆಗಾಲದಲ್ಲಿ ಶಾಲಾ ಮಕ್ಕಳ ʻಬ್ಯಾಗ್ ಹೊರೆʼ ತಗ್ಗಿಸಲು ಮಹತ್ವದ ಕ್ರಮ!
ನಿನ್ನೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿತ್ತು. ಜಿಲ್ಲೆಯ ನದಿ, ತೊರೆ, ಕೆರೆ, ಹಳ್ಳಗಳು ತುಂಬಿ ತುಳುಕುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಪ್ರವಾಹ ಉಂಟಾಗುವ ಸಾಧ್ಯತೆಯೂ ಇದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಂಟ್ವಾಕ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ರಜೆ ಘೋಷಿಸಿದ್ದಾರೆ.
ಇತರೆ ವಿಷಯಗಳು:
ಈ ದಿನದಿಂದ UPI ವಹಿವಾಟುಗಳು ಬಂದ್..!
ಮತ್ತೆ ಆಕಾಶಕ್ಕೇರಿದ ತರಕಾರಿ ಬೆಲೆ..! ಕಂಗಾಲಾದ ಖರೀದಿದಾರರು
ಅಡಿಕೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್! ಜಿಎಸ್‌ಟಿ ಹೊರೆ ಇಳಿಕೆ?