rtgh
Headlines

SSLC Exam-2: ಜೂ.14 ರಿಂದ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ!

Second SSLC Exam
Share

ಹಲೋ ಸ್ನೇಹಿತರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-2 ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಜೂನ್ 14 ರಿಂದ ಆರಂಭವಾಗಲಿದೆ. ಮೇ 15 ರಿಂದ ಜೂನ್‌ 5 ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು.

Second SSLC Exam

ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ. ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಜೂನ್ 14 ರಿಂದ ಆರಂಭವಾಗಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

ಇದನ್ನೂ ಸಹ ಓದಿ : 1 ರಿಂದ 10 ವರ್ಷದ ಎಲ್ಲಾ ಮಕ್ಕಳಿಗೆ ಸಿಗತ್ತೆ ತಿಂಗಳಿಗೆ 1500 ರೂ.! ಆನ್‌ಲೈನ್‌ನಲ್ಲಿ ಅಪ್ಲೇ ಮಾಡಿ

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ 2024 ರ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ಎಸ್ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ: 05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನು ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024 ರ SSLC ಪರೀಕ್ಷೆ-2 ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಇವರು ಪ್ರತ್ಯೇಕವಾಗಿ ಹೊರಡಿಸುತ್ತಾರೆ.

ಇತರೆ ವಿಷಯಗಳು:

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗಾಗಿ ಹೊಸ ಪಟ್ಟಿ! 15 ದಿನಗಳಲ್ಲಿ ಸಿಗಲಿದೆ ರೇಷನ್

ಇಂದಿನಿಂದ 1 ವಾರ ರಾಜ್ಯದಲ್ಲಿ ಭಾರೀ ಮಳೆ!! ಹವಾಮಾನ ಇಲಾಖೆ ಎಚ್ಚರಿಕೆ

SSLC ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹತ್ತಿರ


Share

Leave a Reply

Your email address will not be published. Required fields are marked *