rtgh
Headlines

ಸರ್ಕಾರಿ ನೌಕರರ ಮೂಲ ವೇತನ ಹೆಚ್ಚಳ.! ಎಷ್ಟು ಏರಿಕೆಯಾಗಿದೆ ಗೊತ್ತಾ?

seventh pay commission karnataka
Share

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರಿ ನೌಕರರುಗಳ ಬಹುದಿನಗಳ ಬೇಡಿಕೆ ಆಗಿದ್ದ 7ನೇ ವೇತನ ಆಯೋಗದ ವರದಿ ಸರ್ಕಾರ ಕೈ ಸೇರಿದೆ. ವರದಿ ಜಾರಿ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿ ಜಾರಿಯಾದರೇ ನೌಕರರ ಮೂಲ ವೇತನ ಎಷ್ಟು ಹೆಚ್ಚಾಗಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ತಪ್ಪದೆ ಈ ಲೇಖನವನ್ನು ಕೊನೆಯವರೆಗೂ ಓದಿ.

seventh pay commission karnataka

7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳ ಮಾಡುವುದರ ಜೊತೆಗೆ ಅವರ ಕನಿಷ್ಠ ವೇತನವನ್ನು ತಿಂಗಳಿಗೆ 17,000 ರೂ.ನಿಂದ 27,000 ರೂ.ಗೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ. ಮಾಜಿ ಮುಖ್ಯ ಕಾರ್ಯದರ್ಶಿಯಾದ ಕೆ ಸುಧಾಕರ್ ರಾವ್ ನೇತೃತ್ವದ ಆಯೋಗವು ಲೋಕಸಭೆ ಮಾದರಿ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ವರದಿಯನ್ನು ಸಲ್ಲಿಸಿದೆ.

ನಿಮ್ಮ ಮೂಲ ವೇತನ ಎಷ್ಟಕ್ಕೆ ಏರಿಕೆಯಾಗಲಿದೆ..?

ಮೂಲ ವೇತನದಲ್ಲಿ 27.5% ಹೆಚ್ಚಳ ಘೋಷಿಸಿದೆ. ಇದರೊಂದಿಗೆ ಬೇಸಿಕ್ ಸ್ಯಾಲರಿ 17,000 ರೂ.ನಿಂದ 27,000 ರೂಪಾಯಿಗೆ ಏರಿಕೆಯಾಗಲಿದೆ. ಹಳೇಯ ಬೇಸಿಕ್ ಸ್ಯಾಲರಿಯು 20900 ಆದರೆ ಹೊಸ ವರದಿ ಪ್ರಕಾರ 33,300ಕ್ಕೆ ಏರಿಕೆಯಾಗಲಿದೆ. 40,900 ಇದ್ದರೆ ಅದು 65,950ಕ್ಕೆ ಏರಿಕೆಯಾಗುತ್ತದೆ. ಬೇಸಿಕ್ ಐವತ್ತು ಸಾವಿರದ ನೂರಾಐವತ್ತು ರೂಪಾಯಿ ಇದ್ದರೆ ವೇತನ ಆಯೋಗದ ವರದಿ ಪ್ರಕಾರ ಅದು 79,900 ಬೇಸಿಕ್‌ಗೆ ಬರಲಿದೆ. ಇದರ ಜೊತೆಗೆ ಡಿಎ, ಐಆರ್ ಎಲ್ಲವೂ ಸೇರಿಕೊಂಡು ಸಂಬಳ ಮತ್ತಷ್ಟು ಹೆಚ್ಚಾಗಲಿದೆ.

ರಾಜ್ಯಕ್ಕೆ ಆಗಮಿಸಲಿದ್ದಾನೆ ಮಳೆರಾಯ.! ಯಾವ ಭಾಗದಲ್ಲಿ ಎಷ್ಟು ಮಳೆಯಾಗಲಿದೆ??

ಇನ್ನೂ, ಹಿರಿಯ ಶ್ರೇಣಿ ನೌಕರರ ಆರಂಭಿಕ ಕನಿಷ್ಠ ವೇತನವು ಈಗ 1,04,600 ರೂಪಾಯಿಯಿದ್ದು, ಅದನ್ನು 1,67,200 ರೂಪಾಯಿಗೆ ಪರಿಷ್ಕರಿಸುವಂತೆ ಶಿಫಾರಸ್ಸನ್ನು ಮಾಡಲಾಗಿದೆ. ಸಂಪೂರ್ಣವಾಗಿ ಹಳೆಯ ಬೇಸಿಕ್ ಸ್ಯಾಲರಿ ಮತ್ತು ಹೊಸ ಬೇಸಿಕ್ ಸ್ಯಾಲರಿ, ಹೊಸ ಸ್ಯಾಲರಿ ಗ್ರೋಸ್ ಎಲ್ಲದರ ವಿವರ ಈ ಟ್ವೀಟ್‌ನಲ್ಲಿ ಇದೆ. ವಿವರಗಳನ್ನು ಚೆಕ್ ಮಾಡಿ.

7ನೇ ವೇತನ ಆಯೋಗದ ವರದಿಯು ಪ್ರಸ್ತುತ 1:8.86 ಕನಿಷ್ಠ ಮತ್ತು ಗರಿಷ್ಠ ವೇತನಗಳ ಅನುಪಾತವನ್ನು 18.93ಕ್ಕೆ ಹೆಚ್ಚಿಸಿದೆ. 2022ರ ಜೂನ್‌ನಿಂದ ಈ ವರದಿಯು ಅನುಷ್ಠಾನ ಮಾಡುವಂತೆ ಆಯೋಗವು ತಿಳಿಸಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಈ ಶಿಫಾರಸು ಅನ್ವಯವಾಗಲಿದೆ.

ಮಹಿಳಾ ನೌಕರರು ಮತ್ತು ಪಿಂಚಣಿದಾರ ನಿಯಮದಲ್ಲಿ ಬದಲಾವಣೆಗೆ ಶಿಫಾರಸ್ಸು

ಇನ್ನು, ಮಹಿಳಾ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಂದ ಕುಟುಂಬ ಪಿಂಚಣಿಗಾಗಿ ತಮ್ಮ ಪತಿಯ ಬದಲು ಮಕ್ಕಳ ನಾಮ ನಿರ್ದೇಶನ ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತಾವಿತ ತಿದ್ದುಪಡಿಯು ಮಹಿಳಾ ಸರ್ಕಾರಿ ನೌಕರರು “ಸಕ್ಷಮ ನ್ಯಾಯಾಲಯದಲ್ಲಿ ವಿಚ್ಚೇದನ ಪ್ರಕ್ರಿಯೆ ಬಾಕಿಯಿರುವಾಗ ಅಥವಾ ಸರ್ಕಾರಿ ನೌಕರರು ಅಥವಾ ಮಹಿಳಾ ಪಿಂಚಣಿದಾರರು ಕೌಟುಂಬಿಕ ದೌರ್ಜನ್ಯ ತಡ ಕಾಯ್ದೆ ಅಥವಾ ವರದಕ್ಷಿಣೆ ನಿಷೇಧ ಕಾಯ್ದೆ ಅಥವಾ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ತನ್ನ ಗಂಡನ ವಿರುದ್ಧ ಪ್ರಕರಣವನ್ನು ದಾಖಲು ಮಾಡಿದ್ದಲ್ಲಿ, ಕುಟುಂಬ ಪಿಂಚಣಿಯನ್ನು ಪಡೆಯುವುದಕ್ಕಾಗಿ ಆಕೆಯು ತನ್ನ ಮಗುವನ್ನು / ಮಕ್ಕಳನ್ನು ನಾಮ ನಿರ್ದೇಶನ ಮಾಡಬಹುದಾಗಿದೆ ಎಂದು ಸೂಚಿಸಿದೆ.

ಇತರೆ ವಿಷಯಗಳು:

‘ಮಾದರಿ ನೀತಿ ಸಂಹಿತೆ’ ಅಂದ್ರೆ ಏನು? ಇದನ್ನ ಮೀರಿದ್ರೆ ಏನಾಗುತ್ತೆ? ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

ಕಾರ್ಮಿಕ ಮಂಡಳಿಯಿಂದ ₹10,000 ವಿದ್ಯಾರ್ಥಿವೇತನ.! ಪಡೆಯುವ ಸಂಪೂರ್ಣ ಡೀಟೆಲ್ಸ್


Share

Leave a Reply

Your email address will not be published. Required fields are marked *