ನೈರುತ್ಯ ರೈಲ್ವೆಯಲ್ಲಿ ನಡೆಸಲಿರುವ ಲೋಕೋ ಪೈಲೆಟ್ಗಳ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆಯು ಅವಕಾಶವನ್ನು ಕಲ್ಪಿಸಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಸಂಸದಲ್ಲಿ ತೇಜಸ್ವಿ ಸೂರ್ಯ ಅವರು, ಕನ್ನಡದಲ್ಲಿಯೇ ನೈರುತ್ಯ ರೈಲ್ವೆ ವಲಯದಲ್ಲಿ ಲೋಕೋ ಪೈಲೆಟ್ಗಳ ಹುದ್ದೆಗಳ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಮಾಡಿಕೊಡುವಂತೆ ಮನವಿಯನ್ನು ಮಾಡಿದ್ದು, ಇದಕ್ಕೆ ರೈಲ್ವೆ ಇಲಾಖೆಯು ಸ್ಪಂದಿಸಿ ಕನ್ನಡದಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಿದೆ.
ಇದರಿಂದಾಗಿ ರಾಜ್ಯದಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ತೇಜಸ್ವಿ ಸೂರ್ಯ ಅವರು ಧನ್ಯವಾದಗಳನ್ನು ತಿಳಿಸಿದರು.
ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆಯನ್ನು ಬರೆಯಲು ಅರ್ಜಿಯನ್ನು ಸ್ವೀಕರಿಸಿದ್ದ ನೈರುತ್ಯ ರೈಲ್ವೆಯ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರವೇ ಪರೀಕ್ಷೆಯನ್ನು ಬರೆಯುವ ಷರತ್ತನ್ನು ವಿಧಿಸಿತ್ತು. ಇದರಿಂದಾಗಿ ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಯನ್ನು ಬರೆಯಲು ಸಿದ್ಧತೆಯನ್ನು ನಡೆಸಿದ ರೈಲ್ವೆಯ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿತ್ತು.
ಇದನ್ನೂ ಸಹ ಓದಿ: ಸರ್ಕಾರಿ ನೌಕರರ ತುಟ್ಟಿ ಭತ್ಯೆಯಲ್ಲಿ ಶೇ.3ರಷ್ಟು ಏರಿಕೆ.!
“ನೈಋತ್ಯ ರೈಲ್ವೆಯ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಮಾತ್ರ ಅವಕಾಶವನ್ನು ನೀಡದಿರುವುದನ್ನು ಇಂದು ರೈಲ್ವೆ ಇಲಾಖೆಯು ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶವನ್ನು ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶವನ್ನು ಹೊರಡಿಸಿರುವುದು ಅಭಿನಂದನಾರ್ಹ ಕ್ರಮ.
ಕನ್ನಡಿಗರ & ಕರ್ನಾಟಕ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ಎಂದೆಂದಿಗೂ ಬದ್ಧವಾಗಿದೆ. ಹೀಗಾಗಿ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆಯನ್ನು ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮವನ್ನು ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ. ಸೋಮಣ್ಣ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು” ಎಂದು ತೇಜಸ್ವಿ ಸೂರ್ಯ ಅವರು ತಿಳಿಸಿದ್ದಾರೆ.
ಇತರೆ ವಿಷಯಗಳು:
ಇನ್ಮುಂದೆ ಪಿಂಚಣಿದಾರರಿಗೆ ಮಾಸಿಕ 7500 ರೂ. ಕನಿಷ್ಠ ಪೆನ್ಷನ್! ಕೇಂದ್ರದ ಭರವಸೆ
ದಿಢೀರ್ ದುಪ್ಪಟ್ಟಾದ LPG ಸಿಲಿಂಡರ್ ಬೆಲೆ..!