ಹಲೋ ಸ್ನೇಹಿತರೆ, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದ 10ನೇ ತರಗತಿ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೂರನೇ ಅವಕಾಶ ನೀಡಿದ್ದು, ಮೂರನೇ ಪರೀಕ್ಷೆಯ ನೋಂದಣಿಗೆ ಮತ್ತೆ ಅವಕಾಶ ನೀಡಿದೆ. ಅಭ್ಯರ್ಥಿಗಳು 2024ರ ಜುಲೈ 17ರೊಳಗಾಗಿ ಮೂರನೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೇಗೆ ನೋಂದಣಿ ಮಾಡಿಕೊಳ್ಳುವುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಆಗಸ್ಟ್ 2 ರಿಂದ ಆರಂಭವಾಗಿ 9ರವರೆಗೆ ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯು ನಡೆಯಲಿದೆ. ಹಾಗಾಗಿ, ಜುಲೈ 10 ರಿಂದಲೇ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2022-23ನೇ ಸಾಲಿನಲ್ಲಿಯೂ ಅನುತ್ತೀರ್ಣರಾದ, 2023-24ನೇ ಸಾಲಿನ ಮೊದಲ ಹಾಗೂ ದ್ವಿತೀಯ ಪರೀಕ್ಷೆಗೆ ಗೈರು ಹಾಜರಾದವರು, ತೇರ್ಗಡೆ ಹೊಂದಲು ಸಾಧ್ಯವಾಗದವರು ಈ ಮೂರನೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇನ್ನು, ಕಳೆದ ಪರೀಕ್ಷೆಗಳಲ್ಲಿ ಪಡೆದ ಅಂಕಗಳಿಂದ ತೃಪ್ತರಾಗದವರು, ಇನ್ನೂ ಹೆಚ್ಚಿನ ಅಂಕ ಪಡೆಯಲು ಇಚ್ಛಿಸಿರಿರುವವರು ಕೂಡ ಮೂರನೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ?
- ಪರೀಕ್ಷೆ ಬರೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರು https://kseab.karnataka.gov.in ಪರೀಕ್ಷೆ-3ಕ್ಕೆ ನೋಂದಣಿ ಮಾಡಬೇಕು.
- ಶಾಲಾ ಲಾಗಿನ್ ನಲ್ಲಿ Registration for 2024 Exam-3ನ್ನು ಕ್ಲಿಕ್ ಮಾಡಿದಾಗ ENTER YOUR REGISTER NUMBER ಎನ್ನುವ ಆಯ್ಕೆ ದೊರಕುತ್ತದೆ.
- ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ನಮೂದು ಮಾಡಬೇಕು.
- ನೋಂದಣಿ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು, ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿಷಯಗಳು ಸಂಪೂರ್ಣ ಮಾಹಿತಿ ತೆರೆದುಕೊಳ್ಳುತ್ತವೆ. ಇವುಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶ ಇರುವುದಿಲ್ಲ.
ಶುಲ್ಕದ ವಿವರ ಹೀಗಿದೆ?
2021-2022 ಮತ್ತು 2022-23 ರ ಸಾಲಿನಲ್ಲಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ ಮಾರ್ಚ್/ಏಪ್ರಿಲ್ 2024ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮತ್ತು 2 ಪರೀಕ್ಷೆಗಳಿಗೆ ನೋಂದಾಯಿಸಿಕೊಂಡು ಪೂರ್ಣಗೊಳಿಸಲು ಆಗಿಲ್ಲದ ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದು, ಸದರಿ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಮತ್ತೆ ಭಾವಚಿತ್ರ ಮತ್ತು ಸಹಿಗಳನ್ನು ಅಪ್‌ಲೋಡ್ ಮಾಡುವ ಅವಶ್ಯಕತೆ ಇಲ್ಲ.
ಇತರೆ ವಿಷಯಗಳು:
ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆ
8ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಜ್ಜು.! ಸರ್ಕಾರಿ ನೌಕರರಿಗೆ ಇಂದಿನಿಂದ ಜಾಕ್ ಪಾಟ್