rtgh
Headlines

SSLC ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಬಿಸಿಯೂಟ! ಶಿಕ್ಷಣ ಇಲಾಖೆ ಆದೇಶ

SSLC Exam Kannada
Share

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದ PM ಪೋಷಣ್ ಮಧ್ಯಾಹ್ನದ ಉಪಾಹಾರದ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆಯ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ವಿತರಿಸುವ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ.

SSLC Exam Kannada

ಆದೇಶದಲ್ಲಿರುವಂತೆಯೆ SSLC ಪಬ್ಲಿಕ್ ಪರೀಕ್ಷೆ ದಿನಾಂಕಗಳು : 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ಕಾರ್ಯಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ SSLCಯ ವಾರ್ಷಿಕ ಪಬ್ಲಿಕ್ ಪರೀಕ್ಷೆಯನ್ನು ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಸಹ ಓದಿ: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!! ಮನೆ ಬಾಗಿಲಿಗೆ ಬರಲಿದೆ‌ KSRTC

ಅಡುಗೆಯ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ 1167-ಸರ್ಕಾರಿ ಮತ್ತು 884- ಅನುದಾನಿತ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟವನ್ನು ಸ್ವೀಕರಿಸಲು ಅಪೇಕ್ಷಿಸಿರುವ ಹಾಗೂ ಪರೀಕ್ಷೆಗೆ ಹಾಜರಾಗುವಂತಹ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಹಾಜರಾತಿಯ ಸಂಖ್ಯೆಗೆ ಅನುಗುಣವಾಗಿ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಸೂಚನೆಯನ್ನು ನೀಡಿದೆ.

ಪರೀಕ್ಷಾ ಕೇಂದ್ರಗಳಿರುವ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಅಡುಗೆಯನ್ನು ತಯಾರಿಕೆಯನ್ನು ಮತ್ತು ಬಡಿಸುವ ನಿರ್ವಹಣೆಗೆ ಅಡುಗೆಯ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರಾಗಿ ವಿಷಯದ ಬೋಧಕರಲ್ಲದ ಶಿಕ್ಷಕರಾದ ದೈಹಿಕ ಶಿಕ್ಷಣ ಶಿಕ್ಷಕರು, ವೃತ್ತಿ ಶಿಕ್ಷಕರು ಇದ್ದಲ್ಲಿ ಯಾರಾದರು ಒಬ್ಬರನ್ನು ನಿಯೋಜಿಸಿ ಯಾವುದೇ ರೀತಿಯ ಆರೋಪಗಳಿಗೆ ಅವಕಾಶ ನೀಡದಂತೆ ವಿರ್ವಹಿಸಲು ಸೂಚನೆಯನ್ನು ಹೊರಡಿಸಿದೆ.

ಇನ್ಮುಂದೆ ಸಿಗಲ್ಲ ಫ್ರೀ ಕರೆಂಟ್.!‌ ನೀವು ಕಟ್ಬೇಕು ಫುಲ್ ಅಮೌಂಟ್

5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!! ಗೊಂದಲದಲ್ಲಿದ್ದ ಪೋಷಕರು, ಮಕ್ಕಳಿಗೆ ಬಿಗ್‌ ರಿಲೀಫ್


Share

Leave a Reply

Your email address will not be published. Required fields are marked *