rtgh
Headlines

ಈ ಬಾರಿಯ SSLC ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ! ಮಧು ಬಂಗಾರಪ್ಪ ಸ್ಪಷ್ಟನೆ

SSLC grace mark cancelled
Share

ಹಲೋ ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ತರ ಸುದ್ದಿ ನೀಡಿದೆ, ಇದರ ಹಿನ್ನಲೆ ಈಗಾಗಲೇ ಕರ್ನಾಟಕ ಸರ್ಕಾರ ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡದಿರಲು ತೀರ್ಮಾನಿಸಿದ್ದು, ಪ್ರಸ್ತುತ ಎಸ್‌ಎಲ್‌ಎಲ್‌ಸಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

SSLC grace mark cancelled

ಈಗಾಗಲೇ ಕರ್ನಾಟಕ ಸರ್ಕಾರ ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ನೀಡುವುದನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆ ಹೊಂದಲು ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು.  ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಶಿಕ್ಷಣ ಮಂಡಳಿ ವರದಿ ನೀಡಿದೆ. ಇದಕ್ಕೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳಲಾಗಿತ್ತು. ಮುಂದಿನ ವರ್ಷದಿಂದ ಗ್ರೇಸ್‌ ಮಾರ್ಕ್ ನೀಡುವುದನ್ನು ರದ್ದು ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

ಇದೀಗ ಈ ವಿಷಯವಾಗಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ. ಉಡುಪಿ ದಕ್ಷಿಣ ಕನ್ನಡ ಯಾವಾಗಲೂ ಟಾಪರ್ಸ್ ಆಗಿ ಇರುತ್ತಿದ್ದರು. ಈ ಗ್ರೇಸ್‌ ಮಾರ್ಕ್ಸ್ ನಂತರ ರಿಸಲ್ಟ್ ನಲ್ಲಿ ಇಳಿಮುಖವಾಯಿತು. ಈಗ ಮತ್ತೆ ಉಡುಪಿ, ಮಂಗಳೂರು ಟಾಪರ್ಸ್ ಆಗಿದೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಮತ್ತೆ ಪರೀಕ್ಷೆ ಬರೆಯಲು ಇಚ್ಚಿಸುವವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು.

ಇದನ್ನು ಓದಿ: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ʻಇ-ಆಫೀಸ್ ತಂತ್ರಾಂಶʼ; ರಾಜ್ಯ ಸರ್ಕಾರ ಆದೇಶ

ಶಾಲೆ ಪುನಾರಾರಂಭ ವಿಚಾರವಾಗಿ ಮಾತನಾಡಿದ ಸಚಿವರು, ಈ ಬಾರಿ ಪುಸ್ತಕಗಳು ಯುನಿಫಾರ್ಮ್ ಎಲ್ಲವೂ ಇದೆ. ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಸವಲತ್ತು ತಲುಪಲಿದೆ. ಮೇ 27ನೇ ತಾರೀಖಿನಿಂದ ನಲಿ ಕಲಿ ತರಗತಿ ಆರಂಭವಾಗುತ್ತೆ. ಈ ಬಾರಿ KPS ಶಾಲೆಗಳು ಬರುತ್ತವೆ. ಕೆಪಿಎಸ್ ಶಾಲೆಗಳ ಬಗ್ಗೆ ನಮ್ಮ ಸರಕಾರ ಬದ್ಧತೆ ಹೊಂದಿದೆ. 500 ಶಾಲೆಗಳನ್ನು ಇಡೀ ರಾಜ್ಯದ್ಯಂತ ತೆರೆಯುತ್ತೇವೆ. ಮುಂದಿನ ಮೂರು ವರ್ಷಗಳಲ್ಲಿ 3000 ಶಾಲೆ ತೆರೆಯುತ್ತೇವೆ ಎಂದು ತಿಳಿಸಿದ್ದಾರೆ. ಈ ಶೈಕ್ಷಣಿಕ ವರ್ಷದಿಂದ ಮುಂದಿನ ಮೂರು ವರ್ಷದೊಳಗೆ ಮೂರು ಸಾವಿರ ಕೆಪಿಎಸ್ ಶಾಲೆಗಳು ಆರಂಭವಾಗಲಿದೆ. ಕೆಪಿಎಸ್ ಶಾಲೆಗಳಿಗೆ ತುಂಬಾ ಬೇಡಿಕೆ ಇದ್ದು ಒಳ್ಳೆ ಫಲಿತಾಂಶ ಬರುತ್ತದೆ. ಸಿಎಸ್ಆರ್ ಫಂಡ್ ನಿಂದ ಅನುದಾನ ವ್ಯವಸ್ಥೆ ಮಾಡಲಾಗುವುದು. ಡಿಸಿಎಂ ಡಿಕೆ ಶಿವಕುಮಾರ್ ಇದರ ಫಂಡ್ ಕಲೆಕ್ಷನ್ ಜವಾಬ್ದಾರಿ ವಹಿಸಿದ್ದಾರೆ. ಎಲ್ಲಾ ಕ್ಷೇತ್ರದಲ್ಲೂ 3-6 ಶಾಲೆಗಳು ತೆರೆಯಲಿವೆ ಎಂದಿದ್ದಾರೆ.

ಕಾನೂನಿನ ಪ್ರಕಾರ LKG ಸೇರುವ ಮಕ್ಕಳಿಗೆ ನಾಲ್ಕು ವರ್ಷ ಪೂರ್ಣವಾಗಬೇಕು. ಈ ವಿಚಾರದಲ್ಲಿ ವಯಸ್ಸು ಸಡಲಿಕೆ ಸಾಧ್ಯವಿಲ್ಲ. ಈ ಆದೇಶವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು.

ಇತರೆ ವಿಷಯಗಳು:

ಮಾಂಸ ಪ್ರಿಯರಿಗೆ ಬಿಗ್ ಶಾಕ್: ಚಿಕನ್, ಮಟನ್‌, ಮೊಟ್ಟೆ ಬೆಲೆ ದಿಢೀರ್ ಏರಿಕೆ!

5,8 ಮತ್ತು 9ನೇ ಪಬ್ಲಿಕ್‌ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!


Share

Leave a Reply

Your email address will not be published. Required fields are marked *