ಹಲೋ ಸ್ನೇಹಿತರೆ, ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಯವರು ಮಹತ್ವದ ಸುದ್ದಿ ಹೊರಹಾಕಿದ್ದಾರೆ.
ಈ ಕುರಿತು ಸಂಪೂರ್ಣ ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿಯನ್ನು ಮಾಡಿಕೊಳ್ಳಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಪ್ರಕ್ರಿಯೆ ಪೂರ್ಣ ಆಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!
ಇನ್ಮುಂದೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವರು, ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾಪ ಬಂದ ನಂತರದಲ್ಲಿ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇತರೆ ವಿಷಯಗಳು:
ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್…! ನಿಮ್ಮ ಮನೆ ಬಾಗಿಲಿಗೆ ಔಷಧ ವಿತರಣೆ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮಹತ್ವದ ಕ್ರಮ!