rtgh
Headlines

ಯುವನಿಧಿ ಫಲಾನುಭವಿಗಳು ತಕ್ಷಣ ಈ ಕೆಲಸ ಮಾಡುವಂತೆ ಸೂಚನೆ!

Yuvanidhi Scheme Kannada
Share

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರ ಯುವನಿಧಿ ಗ್ಯಾರಂಟಿ ಯೋಜನೆಗೆ ಚಾಲನೆಯನ್ನು ನೀಡಲಾಗಿದೆ.

Yuvanidhi Scheme Kannada

ಯುವನಿಧಿ ಯೋಜನೆ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧ ಪಟ್ಟ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯದ ಕಚೇರಿಗೆ, (ರೂಂ.ನಂ-22, 2ನೇ ಮಹಡಿ, ಜಿಲ್ಲಾಡಳಿತದ ಭವನದ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗಾಗಿ ಹಾಜರಾಗಬೇಕು.

ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ತಿಂಗಳು 25 ರೊಳಗೆ ಉನ್ನತವಾದ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವುದರ ಕುರಿತು ಸ್ವಯಂ ಘೋಷಣೆಯನ್ನು ನೀಡಬೇಕಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳಾದ ರೇಖಾ ಗಣಪತಿ ಅವರು ತಿಳಿಸಿದ್ದಾರೆ.

ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಸಹ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ 8296020826 / 8123312319 ನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಮದ್ಯ! ಹೋಮ್‌ ಡೆಲಿವರಿಗೆ ಸ್ವಿಗ್ಗಿ, ಜೊಮಾಟೊ ಪ್ಲಾನ್!

12 ಲಕ್ಷ ಸರ್ಕಾರಿ ನೌಕರರ ವೇತನ ಹೆಚ್ಚಳ..! ಈ ತಿಂಗಳಿನಿಂದ ಜಾರಿ


Share

Leave a Reply

Your email address will not be published. Required fields are marked *