ಹಲೋ ಸ್ನೇಹಿತರೆ, ಸರ್ಕಾರದ ಯುವನಿಧಿ ಯೋಜನೆಯಡಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರೂ 1500 ಮತ್ತು ನಿರುದ್ಯೋಗಿ ಪದವಿ ಹೊಂದಿರುವವರಿಗೆ ರೂ 3000 ಮಾಸಿಕ ಭತ್ಯೆ ನೀಡುತ್ತದೆ. ಆದಾಗ್ಯೂ, ಹಣವನ್ನು ಪ್ರತಿ ತಿಂಗಳು ಹಣ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಸರ್ಕಾರವು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಪ್ರಸ್ತುತ ಉದ್ಯೋಗ ಸ್ಥಿತಿಯನ್ನು ಪರಿಶೀಲಿಸಿ ನಂತರ ಎಲ್ಲಾ ಯುವ ನಿಧಿ ಯೋಜನೆಯ ಫಲಾನುಭವಿಗಳಿಗೆ ಮಾಸಿಕ ಸ್ವಯಂ ಘೋಷಣೆ ನಮೂನೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲ ತಿಳಿಸಲಾಗಿದೆ ಕೊನೆವರೆಗೂ ಓದಿ.
Contents
ಅರ್ಹ ಅಭ್ಯರ್ಥಿಗಳು ಮಾಡಬೇಕಾದ ಕೆಲಸ?
ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಹ ಅಭ್ಯರ್ಥಿಗಳು ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ವಿವರವಾಗಿ ತಿಳಿಸಲಾಗಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಪದವಿ/ಸ್ನಾತಕೊತ್ತರ ಪದವಿ ಮತ್ತು ಡಿಪ್ಲೋಮಾವನ್ನು 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು, ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ನಂತರ ಅಭ್ಯರ್ಥಿಗಳಿಗೆ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಾದರೆ, ಪ್ರತಿ ತಿಂಗಳು ‘ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರೆಸುತ್ತಿಲ್ಲ ಹಾಗೂ ಉದ್ಯೋಗಿಯಲ್ಲ’ಎಂದು ತಾವು ಘೋಷಣೆಯನ್ನು ಮಾಡಿರಬೇಕು. ಫೆ.29ರ ವರೆಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
ಹೊಂದಿರಬೇಕಾದ ಅರ್ಹತೆ ಏನು?
- 2022- 23ನೇ ಸಾಲಿನಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿ 6 ತಿಂಗಳು ಆದರೂ ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.
- ಕರ್ನಾಟಕದಲ್ಲಿ ಕನಿಷ್ಠ 6 ವರ್ಷದವರೆಗೆ ಪದವಿ/ಡಿಪ್ಲೊಮಾ ವ್ಯಾಸಂಗದ ಅವಧಿಯಲ್ಲಿ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಇದನ್ನು ಓದಿ: ರೈತರಿಗೆ 16ನೇ ಕಂತಿನ ಹಣ ವರ್ಗಾವಣೆ.! ಫೆಬ್ರವರಿ 28 ರಂದು ಈ ಜಿಲ್ಲೆಯವರಿಗೆ ಸಿಗುತ್ತೆ ₹2,000
ಫಲಾನುಭವಿಗಳು ಯಾರು ?
- ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು ರೂ. 3,000 ನೀಡಲಾಗುತ್ತದೆ.
- ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುವುದು.
- ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಸಿಗಲಿದೆ.
ಯಾರು ಅನರ್ಹರು?
- ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರಿಗೆ ನೀಡಲಾಗುವುದಿಲ್ಲ.
- ಯಾವುದೇ ಅಪ್ರೆಂಟಿಸ್ ವೇತನ ಪಡೆಯುತ್ತಿರುವವರಿಗೂ ಸಿಗುವುದಿಲ್ಲ.
- ಸರ್ಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
- ಸರ್ಕಾರದ ಬೇರೆ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ.
- ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಯೋಜನೆ ಲಾಭ ಸ್ಥಗಿತಗೊಳ್ಳಲಿದೆ.
- ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡವನ್ನು ವಿಧಿಸಲಾಗುತ್ತದೆ.
ಯುವ ನಿಧಿಗೆ ಅರ್ಜಿ ಹೇಗೆ ಸಲ್ಲಿಸಬೇಕು?
- ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
- ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅಗತ್ಯವಾಗಿ ಬೇಕು.
- ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟವಾಗಿರಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿಸಿರಬೇಕು.
- ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
- ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ ಅವಶ್ಯಕ.
ಇತರೆ ವಿಷಯಗಳು:
ಈ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ₹5,000!! ಸರ್ಕಾರದಿಂದ ಹೊಸ ಯೋಜನೆಗೆ ಭರ್ಜರಿ ಚಾಲನೆ
ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್.! ಇನ್ನು ಹಣ ಜಮೆಯಾಗದವರು ತಪ್ಪದೇ ನೋಡಿ