ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿಬೇಕು. ಪದವಿ, ಡಿಪ್ಲೊಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿರಬಾರದು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೊಮಾದವರೆಗೆ ಅಧ್ಯಯನ ಮಾಡಿರಬೇಕು.
ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವವರು ಪ್ರತಿ ತಿಂಗಳು 25ನೇ ತಾರೀಖಿನ ಒಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಪೋರ್ಟಲ್ ನಲ್ಲಿ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ.
ಇದನ್ನೂ ಸಹ ಓದಿ : ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗಾಗಿ ಉಚಿತ ಕಿಟ್ ಯೋಜನೆ ಮರು ಆರಂಭ!
ಯಾವುದೇ ತಿಂಗಳು ತಮಗೆ ನಿರುದ್ಯೋಗ ಭತ್ಯೆ ಸಂದಾಯವಾಗದಿದ್ದರೆ ತಮ್ಮ ಮೂಲ ದಾಖಲೆಗಳನ್ನು ಈ ಕೆಳಕಂಡ ಕಚೇರಿಗಳಲ್ಲಿ ಪರಿಶೀಲನೆಗೆ ಒಳಪಡಿಸಬೇಕು. ಡಿಡಿಪಿಐ ಕಚೇರಿಯಲ್ಲಿ ಎಸ್‍ಎಸ್‍ಎಲ್‍ಸಿ ಪ್ರಮಾಣ ಪತ್ರ, ಡಿಡಿಪಿಯು ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪ್ರಮಾಣ ಪತ್ರ ಹಾಗೂ ಡಿಪ್ಲೊಮಾ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ತಮ್ಮ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.8861866752 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ವಿಷಯಗಳು:
ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ..! ಸರ್ಕಾರದ ಹೊಸ ಯೋಜನೆ
ಡೆಂಗ್ಯೂ ಮುಂಜಾಗ್ರತೆ ರೀಲ್ಸ್ ಮಾಡಿದ್ರೆ ಸಿಗತ್ತೆ ಲಕ್ಷ ರೂಪಾಯಿ ಬಹುಮಾನ! BBMP ಆಫರ್
ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪೋಷಕರ ಖಾತೆಗೆ 22 ಲಕ್ಷ..!