ಕರ್ನಾಟಕ ಸರ್ಕಾರದ ಮಹತ್ವದ ಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆಯು ಒಂದು. ಈ ಯೋಜನೆಯ ನೋಂದಣೆಯು ಈಗಾ ಚಾಲ್ತಿಯಲ್ಲಿದ್ದು, ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿಯ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿಯ ಮೂಲಕ ಪ್ರತಿ ತಿಂಗಳು 3000/- ರೂ. (ಪದವೀಧರ ನಿರುದ್ಯೋಗಿಗಳು) ಹಾಗೂ 1500/- ರೂ. (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್ ಅಥವಾ ಶಿವಮೊಗ್ಗ ಒನ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆಯನ್ನು ನೀಡಬೇಕು. ಸ್ವಯಂ ಘೋಷಣೆಯನ್ನು ನೀಡದಿದ್ದಲ್ಲಿ ಆ ತಿಂಗಳ ಹಣ ಖಾತೆಗೆ ಜಮಾ ಆಗುವುದಿಲ್ಲ.
ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಮಾಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯನ್ನು ಹೊರಡಿಸಿದೆ.
ಇತರೆ ವಿಷಯಗಳು:
ರೈತ ಮಹಿಳೆಯರಿಗಾಗಿ ಬಡ್ಡಿಯಿಲ್ಲದ ಸಾಲ! ರಾಜ್ಯ ಸರ್ಕಾರದ ಹೊಸ ಸ್ಕೀಮ್
ಫಾಸ್ಟ್‌ಟ್ಯಾಗ್ ನಿಯಮದಲ್ಲಿ ಮತ್ತೇ ಬದಲಾವಣೆ..!